ಪಾಕಿಸ್ತಾನ ಸೇನೆಯಿಂದ ಕೊಲೆ: ಕಾಬೂಲ್‌ ಆಸ್ಪತ್ರೆ ಮೇಲಿನ ದಾಳಿ ಖಂಡಿಸಿದ ಕ್ರಿಕೆಟರ್ ರಶೀದ್‌ ಖಾನ್‌

1 Min Read

ಕಾಬೂಲ್: ಆಸ್ಪತ್ರೆ (Kabul Hospital) ಮೇಲೆ ಪಾಕಿಸ್ತಾನ (Pakistan) ನಡೆಸಿದ ಭೀಕರ ದಾಳಿಯನ್ನು ಅಫ್ಘಾನಿಸ್ತಾನ ಕ್ರಿಕೆಟ್‌ ಆಟಗಾರರು ಖಂಡಿಸಿದ್ದಾರೆ. ಪಾಕಿಸ್ತಾನ ಸೇನೆಯಿಂದ ಹತ್ಯೆ ನಡೆದಿದೆ ಎಂದು ರಶೀದ್‌ ಖಾನ್‌ (Rashid Khan) ಕಿಡಿಕಾರಿದ್ದಾರೆ.

- Advertisement -

ಪವಿತ್ರ ರಂಜಾನ್ ತಿಂಗಳಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯ ಪರಿಣಾಮವಾಗಿ ಸಂಭವಿಸಿದ ಜೀವಹಾನಿಗೆ ಅಫ್ಘಾನಿಸ್ತಾನ ಕ್ರಿಕೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‌ ಇದನ್ನೂ ಓದಿ: ಅಫ್ಘಾನ್‌ ಇತಿಹಾಸದಲ್ಲೇ ಅತ್ಯಂತ ಭೀಕರ: ಕಾಬೂಲ್‌ ಆಸ್ಪತ್ರೆ ಮೇಲೆ ಪಾಕಿಸ್ತಾನ ದಾಳಿ – 400 ಜನರು ಸಾವು

- Advertisement -

ಕಾಬೂಲ್‌ನಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಉಂಟಾದ ನಾಗರಿಕರ ಸಾವು-ನೋವುಗಳಿಂದ ನಾನು ತೀವ್ರವಾಗಿ ದುಃಖಿತನಾಗಿದ್ದೇನೆ. ನಾಗರಿಕರ ಮನೆಗಳು, ಶೈಕ್ಷಣಿಕ ಸೌಲಭ್ಯಗಳು ಅಥವಾ ವೈದ್ಯಕೀಯ ಮೂಲಸೌಕರ್ಯಗಳನ್ನು ಟಾರ್ಗೆಟ್‌ ಮಾಡುವುದು ತಪ್ಪು. ಇದು ಯುದ್ಧಾಪರಾಧ ಎಂದು ರಶೀದ್ ಖಾನ್ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

- Advertisement -

- Advertisement -

ಪವಿತ್ರ ರಂಜಾನ್‌ ತಿಂಗಳಲ್ಲಿ ಜೀವಗಳ ವಿರುದ್ಧ ಅಮಾನವೀಯವಾಗಿ ನಡೆದುಕೊಳ್ಳುವುದು ಅಸಹ್ಯಕರ ಮತ್ತು ತೀವ್ರ ಕಳವಳಕಾರಿ. ಈ ನಡೆ ವಿಭಜನೆ ಮತ್ತು ದ್ವೇಷವನ್ನು ಹೆಚ್ಚಿಸುತ್ತದೆ. ದೌರ್ಜನ್ಯವನ್ನು ಕೂಲಂಕಷವಾಗಿ ತನಿಖೆ ಮಾಡಿ ಅಪರಾಧಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ವಿಶ್ವಸಂಸ್ಥೆ ಮತ್ತು ಮಾನವ ಹಕ್ಕು ಸಂಸ್ಥೆಗಳಿಗೆ ಮನವಿ ಮಾಡುತ್ತಾನೆ. ಈ ಕಷ್ಟದ ಸಮಯದಲ್ಲಿ ನಾನು ನನ್ನ ಆಫ್ಘನ್‌ ಜನರೊಂದಿಗೆ ನಿಲ್ಲುತ್ತೇನೆ ಎಂದು ರಶೀದ್‌ ಖಾನ್‌ ತಿಳಿಸಿದ್ದಾರೆ. ಇದನ್ನೂ ಓದಿ: 18ನೇ ದಿನಕ್ಕೆ ಕಾಲಿಟ್ಟ ಯುದ್ಧ – ಇರಾನ್‌ನ 200ಕ್ಕೂ ಹೆಚ್ಚು ಸೇನಾ ನೆಲೆಗಳು ಉಡೀಸ್

ಕಾಬೂಲ್‌ನ ಆಸ್ಪತ್ರೆ ಮೇಲೆ ಪಾಕಿಸ್ತಾನ ನಡೆಸಿದ ಬಾಂಬ್‌ ದಾಳಿಯಲ್ಲಿ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಫ್ಘಾನಿಸ್ತಾನ (Afghanistan) ಇತಿಹಾಸದಲ್ಲೇ ಇದು ಅತ್ಯಂತ ಭೀಕರ ದಾಳಿಯಾಗಿದೆ. ಸ್ಥಳೀಯ ಸಮಯ ರಾತ್ರಿ 9 ಗಂಟೆ ಸುಮಾರಿಗೆ 2,000 ಹಾಸಿಗೆ ಸೌಲಭ್ಯವಿರುವ ದೊಡ್ಡ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆದಿದೆ. 400 ಮಂದಿ ಸಾವಿಗೀಡಾಗಿದ್ದು, 250 ಜನರು ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನದ ಉಪ ಸರ್ಕಾರಿ ವಕ್ತಾರ ಹಮ್ದುಲ್ಲಾ ಫಿತ್ರಾತ್ ಹೇಳಿದ್ದಾರೆ.

Share This Article