ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಲಂಚ್ ಡೇಟ್- ಮತ್ತೆ ಡೇಟಿಂಗ್‌ ಬಗ್ಗೆ ಶುರುವಾಯ್ತು ಚರ್ಚೆ

Public TV
1 Min Read

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿಜಯ್ ದೇವರಕೊಂಡ (Vijay Devarakonda) ಜೊತೆ ಲಂಚ್ ಡೇಟ್‌ಗೆ ತೆರಳಿದ್ದಾರೆ. ಮುಂಬೈನ ರೆಸ್ಟೋರೆಂಟ್ ಮುಂದೆ ಮಾಸ್ಕ್ ಧರಿಸಿ ಬಂದಿರುವ ಇಬ್ಬರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಈ ಜೋಡಿಯ ಡೇಟಿಂಗ್‌ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಇದನ್ನೂ ಓದಿ:ಬೆಡ್‌ರೂಮ್ ಫೋಟೋ ಹಂಚಿಕೊಂಡ ‘ಗಿಲ್ಲಿ’ ನಟಿ ರಕುಲ್

ಟಾಲಿವುಡ್ ನಟ ವಿಜಯ್ ದೇವರಕೊಂಡ ಜೊತೆಗಿನ ರಶ್ಮಿಕಾ ಡೇಟಿಂಗ್ ಬಗ್ಗೆ ಆಗಾಗ ಚರ್ಚೆಗೆ ಗ್ರಾಸವಾಗುತ್ತಲೇ ಇರುತ್ತದೆ. ಆದರೆ ಇದುವರೆಗೂ ಈ ವಿಚಾರ ನಿಜನಾ ಎಂಬುದರ ಬಗ್ಗೆ ಈ ಜೋಡಿ ಸ್ಪಷ್ಟನೆ ನೀಡಿಲ್ಲ. ಇಬ್ಬರೂ ಲಂಚ್ ಡೇಟ್ ಮಾಡುವ ಮೂಲಕ ಇದೀಗ ಡೇಟಿಂಗ್ ಸುದ್ದಿಗೆ ಪುಷ್ಠಿ ಸಿಕ್ಕಂತಾಗಿದೆ. ಇದನ್ನೂ ಓದಿ:ಯುಗಾದಿ ಹಬ್ಬದ ಹಿನ್ನೆಲೆ ಪತ್ನಿ ಜೊತೆ ಡಾಲಿ ಟೆಂಪಲ್ ರನ್

ಮುಂಬೈನ ರೆಸ್ಟೋರೆಂಟ್‌ಗೆ ರಶ್ಮಿಕಾ ಕ್ಯಾಪ್ ಮತ್ತು ಮಾಸ್ಕ್ ಧರಿಸಿ ಆಗಮಿಸಿದ್ದಾರೆ. ಬಳಿಕ ಪಾಪರಾಜಿಗಳ ಕ್ಯಾಮೆರಾಗೆ ಪೋಸ್ ಕೊಟ್ಟು ತೆರಳಿದ್ದಾರೆ. ಆ ನಂತರ ವಿಜಯ್ ಕೂಡ ಅದೇ ರೆಸ್ಟೋರೆಂಟ್ ಮಾಸ್ಕ್ ಧರಿಸಿ ಒಳಗೆ ಹೋಗಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇಬ್ಬರ ಲವ್ವಿ ಡವ್ವಿ ಈಗ ಹಾಟ್ ಟಾಪಿಕ್ ಆಗಿದೆ.

ಗೀತ ಗೋವಿಂದಂ, ಡಿಯರ್ ಕಾಮ್ರೆಡ್ ಸಿನಿಮಾಗಳಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಸೂಪರ್‌ ಹಿಟ್‌ ಅಗಿತ್ತು.

Share This Article