ಅಪ್ಪಟ ಭಾರತೀಯ ನಾರಿ ಅವತಾರದಲ್ಲಿ ರಶ್ಮಿಕಾ ಮಂದಣ್ಣ

Public TV
2 Min Read

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಸರ್ ಪ್ರೈಸ್ ಕೊಟ್ಟಿದೆ ಅನಿಮಲ್ ಸಿನಿಮಾ ಟೀಮ್. ಇಂದು ಬಾಲಿವುಡ್ ನ ‘ಅನಿಮಲ್’ ಸಿನಿಮಾದ ರಶ್ಮಿಕಾ ಅವರ ಫಸ್ಟ್ ಲುಕ್ (First Look) ರಿಲೀಸ್ ಆಗಿದ್ದು, ಈ ಸಿನಿಮಾದಲ್ಲಿ ಅವರು ಅಪ್ಪಟ ಭಾರತೀಯ ನಾರಿ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗೀತಾಂಜಲಿ ಎಂಬ ಪಾತ್ರದ ಮೂಲಕ ಅಭಿಮಾನಿಗಳನ್ನು ರಶ್ಮಿಕಾ ರಂಜಿಸಲಿದ್ದಾರೆ.

‘ಅನಿಮಲ್’ (Animal) ಚಿತ್ರ ತಂಡದಿಂದ ಮತ್ತೊಂದು ಬಿಗ್‌ ಅಪ್‌ಡೇಟ್‌ವೊಂದು ಸಿಕ್ಕಿದೆ. ಇದೀಗ ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಅನಿಮಲ್ ಚಿತ್ರದಲ್ಲಿನ ರಣ್‌ಬೀರ್ ಖಡಕ್ ಲುಕ್ ರಿವೀಲ್ ಮಾಡಿ, ಚಿತ್ರದ ಟೀಸರ್ ಬಗ್ಗೆ ಬಿಗ್ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಇದೇ ಸೆ.28ರಂದು ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನದ ಅನಿಮಲ್ ಚಿತ್ರದಲ್ಲಿ ರಣ್‌ಬೀರ್ ಕಪೂರ್ (Ranbir Kapoor) ನಾಯಕ ನಟನಾಗಿ ಬಣ್ಣ ಹಚ್ಚಿದ್ದಾರೆ. ರಣ್‌ಬೀರ್‌ಗೆ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ಜೊತೆಯಾಗಿದ್ದಾರೆ. ಸದ್ಯ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು, ರಣ್‌ಬೀರ್ ಮಾಸ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಕೂಲಿಂಗ್ ಗ್ಲ್ಯಾಸ್ ಧರಿಸಿ, ಸಿಗರೇಟ್ ಬಾಯಲಿಟ್ಟಿರೋ ಲುಕ್‌ನಲ್ಲಿ ನಟ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ.

ರಣ್‌ಬೀರ್ ಕಪೂರ್ ಹುಟ್ಟುಹಬ್ಬದಂದು ಸೆ.28ಕ್ಕೆ ಬೆಳಿಗ್ಗೆ 10 ಗಂಟೆಗೆ ‘ಅನಿಮಲ್’ ಟೀಸರ್ ರಿಲೀಸ್ ಆಗಲಿದೆ. ಇನ್ನೂ ಮನಾಲಿ, ಹಿಮಾಚಲ ಪ್ರದೇಶ ಸೇರಿದಂತೆ ಹಲವೆಡೆ ಚಿತ್ರದ ಶೂಟಿಂಗ್ ಮಾಡಲಾಗಿದ್ದು, ಚಿತ್ರೀಕರಣ ಪೂರ್ಣಗೊಂಡಿದೆ. ಚಿತ್ರದ ಗುಣಮಟ್ಟದ ದೃಷ್ಟಿಯಿಂದ ರಿಲೀಸ್ ಡೇಟ್ ಮುಂದೂಡಲಾಗಿದ್ದು, ಡಿ.1ಕ್ಕೆ ಅನಿಮಲ್ ಸಿನಿಮಾ ರಿಲೀಸ್ ಆಗಲಿದೆ.

 

ಬಿಗ್ ಬಿ ಜೊತೆಗಿನ ‘ಗುಡ್ ಬೈ’ (Good Bye) ಮತ್ತು ‘ಮಿಷನ್ ಮಜ್ನು’ ಬಳಿಕ ರಶ್ಮಿಕಾ ನಟನೆಯ ಬಾಲಿವುಡ್ 3ನೇ ಪ್ರಾಜೆಕ್ಟ್ ಅನಿಮಲ್ ಚಿತ್ರವಾಗಿದ್ದು, ಸಿನಿಮಾದ ಬಗ್ಗೆ ಶ್ರೀವಲ್ಲಿ ಫ್ಯಾನ್ಸ್‌ಗೆ ದೊಡ್ಡ ಮಟ್ಟದಲ್ಲಿ ನಿರೀಕ್ಷೆಯಿದೆ. ರಣ್‌ಬೀರ್-ರಶ್ಮಿಕಾ ಮೊದಲ ಬಾರಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದು, ಸಿನಿಮಾ ನೋಡಲು ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್