ಮಣಿಪುರ ಮಹಿಳೆಯರ ಮೇಲಿನ ದೌರ್ಜನ್ಯ: ಕಠಿಣ ಶಿಕ್ಷೆಯಾಗಲಿ ಎಂದ ರಶ್ಮಿಕಾ ಮಂದಣ್ಣ

Public TV
2 Min Read

ಣಿಪುರದ (Manipur) ಬುಡಕಟ್ಟು ಜನಾಂಗದ ಇಬ್ಬರು ಮಹಿಳೆಯರನ್ನು (Womens) ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ದೇಶವ್ಯಾಪ್ತಿ ಆಕ್ರೋಶ ವ್ಯಕ್ತವಾಗುತ್ತಿದೆ. ತಪ್ಪು ಮಾಡಿರುವ ದುಷ್ಟರಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ ಎಂದು ಬಾಲಿವುಡ್ ಕಲಾವಿದರು ಕೂಡ ಆಗ್ರಹ ಮಾಡಿದ್ದಾರೆ. ಈ ಬೆನ್ನಲ್ಲೇ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಕನ್ನಡದ ‘ಕಿರಿಕ್ ಪಾರ್ಟಿ’ (Kirik Party) ನಟಿ ರಶ್ಮಿಕಾ ಮಂದಣ್ಣ ಈಗ ಪ್ಯಾನ್ ಇಂಡಿಯಾ ನಟಿಯಾಗಿ ಗಮನ ಸೆಳೆಯುತ್ತಿದ್ದಾರೆ. ಸ್ಟಾರ್ ನಟರಿಗೆ ನಾಯಕಿಯಾಗುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಪುಷ್ಪ 2, ಅನಿಮಲ್, ಟೈಗರ್ ಶ್ರಾಫ್ ಜೊತೆಗಿನ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ಆಕ್ಟೀವ್ ಆಗಿದ್ದಾರೆ.

ಮಣಿಪುರ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬಾಲಿವುಡ್ ಸ್ಟಾರ್ಸ್ ಪ್ರತಿಕ್ರಿಯೆ ನೀಡಿದ್ದರು. ಈಗ ರಶ್ಮಿಕಾ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಓದಿದ್ದನ್ನು ನಂಬಲು ಆಗುತ್ತಿಲ್ಲ. ಕ್ಷಮಿಸಿ, ದೇಶದಲ್ಲಿ ಏನು ನಡೆಯುತ್ತಿದೆ. ಮಣಿಪುರದ ಮಹಿಳೆಯರ ಪರ ನಟಿ ಮಾತನಾಡಿದ್ದಾರೆ. ದುಷ್ಟರಿಗೆ ತಕ್ಕ ಶಿಕ್ಷೆಯಾಗಲಿ. ಅಪರಾಧಿಗಳಿಗೆ ಪೂರ್ಣ ಪ್ರಮಾಣದಲ್ಲಿ ಶಿಕ್ಷೆಯಾಗುತ್ತದೆ ಎಂದು ಭಾವಿಸುತ್ತೇನೆ ಎಂದು ರಶ್ಮಿಕಾ ಮಾತನಾಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:‘ಹಿರಣ್ಯಕಶ್ಯಪ’ನಾಗಿ ಎಂಟ್ರಿ ಕೊಟ್ಟ ರಾಣಾ ದಗ್ಗುಬಾಟಿ ಮೇಲೆ ಶಾಕುಂತಲಂ ನಿರ್ದೇಶಕ ಗರಂ

ಖ್ಯಾತ ನಟರಾದ ಸಂಜಯ್ ದತ್, ಅಕ್ಷಯ್ ಕುಮಾರ್, ರಿತೇಶ್ ದೇಶಮುಖ, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ಕಿಯಾರಾ ಅಡ್ವಾಣಿ ಸೇರಿದಂತೆ ಹಲವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸಿದ್ದಾರೆ. ಜೊತೆಗೆ ಈ ಘಟನೆಗೆ ಕಾರಣರಾದ ದುರುಳರಿಗೆ ಆದಷ್ಟು ಬೇಗ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಈ ಘಟನೆಯು ಅತ್ಯಂತ ಹೇಯ ಕೃತ್ಯವಾಗಿದ್ದು, ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ಮಹಿಳೆಯರ ಮೇಲಿನ ದೌರ್ಜನ್ಯದ ವಿಡಿಯೋ ನನಗೆ ಅತ್ಯಂತ ನೋವು ತಂದಿದೆ. ತಪ್ಪು ಮಾಡಿದರಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ಸಂಜಯ್ ದತ್ ಟ್ವೀಟ್ ಮಾಡಿದ್ದಾರೆ. ಮಹಿಳೆಯರ ನೋವಿಗೆ ಸ್ಪಂದಿಸುವುದಾಗಿ ತಿಳಿಸಿದ್ದಾರೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್