ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ

1 Min Read

ಹುಭಾಷಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್‌ ದೇವರಕೊಂಡ (Vijay Deverakonda) ಅವರ ಮದುವೆ ಇಂದು ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದಿದೆ. ಬೆಳಗ್ಗೆ 8 ಗಂಟೆಗೆ ನಡೆದ ಶುಭ ಮುಹೂರ್ತದಲ್ಲಿ ವಿರೋಶ್ ಜೋಡಿ ಹೊಸ ಜೀವನಕ್ಕೆ ಕಾಲಿಟ್ಟಿದೆ.

ಉದಯಪುರದ ಮದುವೆ ಸಮಾರಂಭಕ್ಕೆ ಸಿನಿಮಾ ಉದ್ಯಮದ ಆಪ್ತರಿಗೆ ಮಾತ್ರ ರಶ್ಮಿಕಾ ಮಂದಣ್ಣ ಆಹ್ವಾನ ನೀಡಿದ್ದಾರೆ. ಮೂಲಗಳ ಪ್ರಕಾರ ಅವರ ಮದುವೆ ಆಹ್ವಾನ ನಟಿ ಆಶಿಕಾ ರಂಗನಾಥ್ ಅವರಿಗೆ ಮಾತ್ರ ಬಂದಿದೆ. ಆಶಿಕಾ ರಂಗನಾಥ್ (Ashika Ranganath) ಅವರ ಇನ್‌ಸ್ಟಾ ಸ್ಟೋರಿ ಮೂಲಕ ಈ ವಿಚಾರ ಬಹಿರಂಗವಾಗಿದೆ. ಇದನ್ನೂ ಓದಿ: Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!

ಮಾರ್ಚ್ 4ರಂದು ಕೈದರಾಬಾದ್‌ನಲ್ಲಿ ಅದ್ದೂರಿ ಆರತಕ್ಷತೆಗೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನದ ಜೊತೆಗೆ ಖಾಸಗಿ ಸಂದೇಶವೂ ರವಾನೆಯಾಗಿದೆ. ಶಿವರಾಜ್ ಕುಮಾ‌ರ್, ಕಿಚ್ಚ ಸುದೀಪ್, ಯಶ್, ರವಿಚಂದ್ರನ್, ಧ್ರುವ ಸರ್ಜಾ, ಗಣೇಶ್, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ನಿರ್ದೇಶಕರಾದ ಎ.ಹರ್ಷ, ನಂದ ಕಿಶೋರ್, ಸಿಂಪಲ್ ಸುನಿ ಆರತಕ್ಷತೆಗೆ ಆಹ್ವಾನ ಹೋಗಿದೆ ಎನ್ನಲಾಗುತ್ತಿದೆ.

ಕಿರಿಕ್ ಪಾರ್ಟಿಯಿಂದ ಸಿನಿಮಾ ಜಗತ್ತು ಪ್ರವೇಶಿಸಿದ ರಶ್ಮಿಕಾ 2021ರಲ್ಲಿ ಬಿಡುಗಡೆಯಾದ ‘ಪೊಗರು’ ಸಿನಿಮಾವರೆಗೆ ಐದು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.

Share This Article