ಪುಷ್ಪಾ 2 ಚಿತ್ರಕ್ಕೆ ರಶ್ಮಿಕಾ ನಾಯಕಿ, ಶ್ರೀಲೀಲಾ ಡಾನ್ಸರ್: ಏನಿದು ಹೊಸ ಸುದ್ದಿ?

Public TV
2 Min Read

ಪುಷ್ಪ ಸಿನಿಮಾ ಹಿಟ್ ಆಗಲು ‘ಹುಂ ಅಂಟವಾ ಮಾವ’ ಐಟಂ ಸಾಂಗ್ (Item Song) ಕೂಡ ಕಾರಣ ಎನ್ನುವುದನ್ನು ಅಲ್ಲಗಳೆಯುವಂತಿಲ್ಲ. ಸಮಂತಾ ಈ ಹಾಡಿಗೆ ಮೈಚಳಿ ಬಿಟ್ಟು ಕುಣಿದಿದ್ದರು. ಪಡ್ಡೆಗಳ ಹೃದಯದಲ್ಲಿ ಚಿಟ್ಟೆ ಹಾರಿಸಿದ್ದರು. ಈ ಹಾಡು ಹಿಟ್ ಆಗಿದ್ದರಿಂದ, ಚಿತ್ರದ ಗೆಲುವಿಗೂ ಅದು ಸಹಕಾರಿ ಆಯಿತು. ಪುಷ್ಪ 2ನಲ್ಲೂ ಅಂಥದ್ದೊಂದು ಫಾರ್ಮುಲಾವನ್ನು ಮತ್ತೆ ವರ್ಕ್ ಮಾಡುತ್ತಿದ್ದಾರೆ ನಿರ್ದೇಶಕರು. ಪುಷ್ಪ 2ನಲ್ಲೂ ಒಂದು ಐಟಂ ಸಾಂಗ್ ಇರಲಿದ್ದು, ಅದಕ್ಕೆ ಬಾಲಿವುಡ್ ನಟಿ ಊರ್ವಶಿ ರೌಟೇಲಾ (Urvashi Rautela) ಹೆಜ್ಜೆ ಹಾಕಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಊವರ್ಶಿ ಬದಲು ಕನ್ನಡದ ನಟಿ ಶ್ರೀಲೀಲಾ (Sreeleela)  ಡಾನ್ಸ್ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಸದ್ಯ ತೆಲುಗು ಚಿತ್ರೋದ್ಯಮದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಶ್ರೀಲೀಲಾ ಸ್ಪರ್ಧೆಗೆ ಬಿದ್ದಿದ್ದಾರೆ. ರಶ್ಮಿಕಾಗೆ ಸಿಗಬೇಕಿದ್ದ ಹಲವು ಅವಕಾಶಗಳನ್ನು ಶ್ರೀಲೀಲಾ ಕಿತ್ತುಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಪುಷ್ಪಾ 2 ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದರೆ, ಶ್ರೀಲೀಲಾ ಕೇವಲ ಐಟಂ ಹಾಡಿಗೆ ಸೊಂಟ ಬಳುಕಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರತಂಡದಿಂದ ಯಾವುದೇ ಮಾಹಿತಿ ಅಧಿಕೃತವಾಗಿ ಹೊರ ಬೀಳದೇ ಇದ್ದರೂ, ಸುದ್ದಿಯಂತೂ ಸಖತ್ ಸೇಲ್ ಆಗುತ್ತಿದೆ.

ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 ಸಿನಿಮಾದ ಶೂಟಿಂಗ್ ಕುಂಟುತ್ತಾ ಸಾಗಿದೆ. ಸದ್ಯ ಚಿತ್ರದ ಕ್ಲೈಮ್ಯಾಕ್ಸ್ (Climax) ದೃಶ್ಯದ ಚಿತ್ರೀಕರಣವನ್ನು ಮಾಡಲು ನಿರ್ದೇಶಕ ಸುಕುಮಾರನ್ (Sukumaran) ಪ್ಲ್ಯಾನ್ ಮಾಡಿದ್ದು, ಅದೊಂದು ರೋಮಾಂಚನಕಾರಿ ನೀಡುವಂತಹ ಸನ್ನಿವೇಶವಾಗಿದೆ ಎಂದು ಹೇಳಲಾಗುತ್ತಿದೆ. ಈ ದೃಶ್ಯವನ್ನು ತಿರುಪತಿ ಜಿಲ್ಲೆಯ ಪೂರ್ವ ಘಟ್ಟದಲ್ಲಿರುವ ಸ್ವರ್ಣಮುಖಿ (Swarnamukhi) ನದಿಯ ತೀರದಲ್ಲಿ ಶೂಟ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಕ್ಲೈಮ್ಯಾಕ್ಸ್ ಸನ್ನಿವೇಶದಲ್ಲಿ ಅಲ್ಲು ಅರ್ಜುನ್ ಜೊತೆ ಫಾಸಿಲ್ ಕೂಡ ಭಾಗಿಯಾಗಲಿದ್ದಾರಂತೆ. ಈ ದೃಶ್ಯಕ್ಕೆ ಈಗಿನಿಂದಲೇ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ರಕ್ತ ಚಂದನವನ್ನು ಕಳ್ಳ ಮಾರ್ಗದಲ್ಲಿ ಸಾಗಿಸುವ ಪುಷ್ಪರಾಜನ ವಿರುದ್ಧ ಭನ್ವಿರ್ ಸಿಂಗ್ ಮಾಡುವ ದಾಳಿಯೇ ಕ್ಲೈಮ್ಯಾಕ್ಸ್ ದೃಶ್ಯ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ದುಲ್ಕರ್ ಸಲ್ಮಾನ್ ಚಿತ್ರಕ್ಕೆ ‘ಲಕ್ಕಿ ಬಾಸ್ಕರ್’ ಟೈಟಲ್ ಫಿಕ್ಸ್

ಈ ನಡುವೆ ‘ಪುಷ್ಪ 2’ (Pushpa 2) ಸಿನಿಮಾದ ಆಡಿಯೋ (Audio) ಹಕ್ಕು (Right) ಭರ್ಜರಿ ಮೊತ್ತಕ್ಕೆ ಸೇಲ್ ಆಗಿದೆ. ಈವರೆಗೂ ದಾಖಲಾಗಿದ್ದ ಎಲ್ಲ ಮೊತ್ತವನ್ನೂ ಅದು ಹಿಂದಿಕ್ಕಿದ್ದು ಟಿ ಸೀರಿಸ್ ಕಂಪೆನಿಯು 65 ಕೋಟಿ ರೂಪಾಯಿ ಹಣ ನೀಡಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ ಎಂದು ವರದಿಯಾಗಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು ಸೇರಿದಂತೆ ರಿಲೀಸ್ ಆಗುವ ಅಷ್ಟು ಭಾಷೆಗಳಿಗೆ ಈ ಹಕ್ಕು ಅನ್ವಯಿಸಲಿದೆ.

 

ಈ ಹಿಂದೆ ರಿಲೀಸ್ ಆಗಿರುವ ಬಾಹುಬಲಿ ಚಿತ್ರದ ಆಡಿಯೋ ಹಕ್ಕು ಹತ್ತು ಕೋಟಿ ಸೇಲ್ ಆಗಿತ್ತು. ಆರ್.ಆರ್.ಆರ್ ಆಡಿಯೋ ಹಕ್ಕು 25 ಕೋಟಿಗೆ ಬಿಕರಿ ಆಗಿತ್ತು. ಸಾಹೋ ಸಿನಿಮಾದ ಆಡಿಯೋ ಹಕ್ಕು ಕೂಡ 22 ಕೋಟಿಗೆ ಸೇಲ್ ಆಗಿತ್ತು. ಈ ಎಲ್ಲ ದಾಖಲೆಗಳನ್ನೂ ಪುಷ್ಪ 2 ಸಿನಿಮಾ ಮುರಿದಿದೆ. ಅಲ್ಲದೇ, ಓಟಿಟಿಗೂ ಭಾರೀ ಮೊತ್ತಕ್ಕೆ ಮಾತುಕತೆ ನಡೆಯುತ್ತಿದೆ ಎಂದು ವರದಿ ಆಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್