ರತನ್ ಟಾಟಾ ನಿಧನ; ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ – ಏಕನಾಥ್ ಶಿಂಧೆ

Public TV
2 Min Read

– ಇಡೀ ದಿನ ಮಹಾರಾಷ್ಟ್ರದಲ್ಲಿ ಶೋಕಾಚರಣೆ

ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ಅವರ ಅಂತ್ಯಕ್ರಿಯೆಯನ್ನು (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಹೇಳಿದ್ದಾರೆ.

ಅನಾರೋಗ್ಯ ಹಿನ್ನೆಲೆ ಮುಂಬೈನ (Mumbai) ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು, ರಾಜಕಾರಣಿಗಳು ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಉದ್ಯಮಿ ರತನ್‌ ಟಾಟಾ ವಿಧಿವಶ – ಸಿಎಂ ಸೇರಿ ಹಲವು ಗಣ್ಯರಿಂದ ಸಂತಾಪ

ರತನ್ ಟಾಟಾ ಅವರ ನಿಧನದ ಕುರಿತು ಏಕನಾಥ್ ಶಿಂಧೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಟಾಟಾ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಇಂದು (ಗುರುವಾರ) ಮಹಾರಾಷ್ಟ್ರದಲ್ಲಿ ಶೋಕಾಚರಣೆ ಮಾಡಲಾಗುತ್ತದೆ. ಗೌರವ ಸೂಚಕವಾಗಿ ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಇಂದು ನಿಗದಿಯಾಗಿದ್ದ ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರತನ್ ಟಾಟಾ ದೂರದೃಷ್ಟಿಯ ಉದ್ಯಮಿ, ಅಸಾಧಾರಣ ವ್ಯಕ್ತಿ: ಪ್ರಧಾನಿ ಮೋದಿ ಸಂತಾಪ

ಟಾಟಾ ಅವರ ಪಾರ್ಥಿವ ಶರೀರವನ್ನು ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್‌ನಲ್ಲಿ (NCPA) ಬೆಳಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ಇರಿಸಲಾಗುವುದು. ಅಲ್ಲಿ ಜನರು ಅಂತಿಮ ನಮನ ಸಲ್ಲಿಸಬಹುದು. ಬಳಿಕ ವರ್ಲಿ ಪ್ರದೇಶದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ

ರತನ್ ಟಾಟಾ ಅವರು ಭವಿಷ್ಯದ ಪೀಳಿಗೆಯ ಉದ್ಯಮಿಗಳಿಗೆ ಮಾದರಿಯಾಗಿದ್ದರು ಮತ್ತು ಭಾರತದ ಕೈಗಾರಿಕಾ ಬೆಳವಣಿಗೆಯ ಸಂಕೇತ. 2008ರ ಮುಂಬೈ ದಾಳಿಯ ನಂತರ ಅವರು ತೋರಿದ ದೃಢತೆಯನ್ನು ಪ್ರತಿಯೊಬ್ಬರೂ ಯಾವಾಗಲೂ ನೆನಪಿಸಿಕೊಳ್ಳುತ್ತಾರೆ. ಅವರ ದೃಢ ನಿರ್ಧಾರಗಳು, ಧೈರ್ಯದ ಮನೋಭಾವ ಮತ್ತು ಸಾಮಾಜಿಕ ಬದ್ಧತೆ ಸದಾ ನೆನಪಿನಲ್ಲಿ ಉಳಿಯುತ್ತದೆ. ದಿವಂಗತ ರತನ್ ಟಾಟಾ ಅವರ ಅಂತ್ಯ ಸಂಸ್ಕಾರವನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಏಕನಾಥ್ ಶಿಂಧೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಒತ್ತಡಕ್ಕೆ ಮಣಿದು ಬಲವಂತವಾಗಿ ದೆಹಲಿ ಸಿಎಂ ಮನೆ ಖಾಲಿ ಮಾಡಿಸಲಾಗಿದೆ: ಎಎಪಿ ಆರೋಪ

Share This Article