ರೇವ್ ಪಾರ್ಟಿ ಪ್ರಕರಣ: 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್!

Public TV
1 Min Read

– ನಟಿ ಹೇಮಾ ಪಾರ್ಟಿಯಲ್ಲಿ ಭಾಗಿಯಾಗಿರೋದು ದೃಢ

ಬೆಂಗಳೂರು: ಇಲ್ಲಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್‌ ರಿಪೋರ್ಟ್ ಪಾಸಿಟಿವ್ ಬಂದಿದೆ.

73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿದೆ. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ತೆಲುಗು ಕಿರುತೆರೆ ನಟಿ ಹೇಮ(ಕೃಷ್ಣವೇಣಿ) ಪಾಲ್ಗೊಂಡಿರುವುದು ಬಯಲಾಗಿದೆ. ಯಾಕೆಂದರೆ ಈಕೆಯ ಬ್ಲಡ್‌ ರಿಪೋರ್ಟ್‌ನಲ್ಲಿ ಮಾದಕ ವಸ್ತು ತೆಗೆದುಕೊಂಡಿರುವುದು ಸಾಬೀತಾಗಿದೆ.

ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಿರುವ ಸುಳಿವು ಸಿಕ್ಕಿದೆ. ಎಂಡಿಎಂಎ, ಕೊಕೇನ್, ಹೈಡೋಗಾಂಜಾ ಪತ್ತೆಯಾಗಿದೆ. ಸದ್ಯ ಬ್ಲಡ್ ರಿಪೋರ್ಟ್ ನಲ್ಲಿ ಪಾಸಿಟಿವ್ ಬಂದವರಿಗೆ ಸಿಸಿಬಿ ನೋಟೀಸ್ ನೀಡಲು ಮುಂದಾಗಿದೆ. ಇದನ್ನೂ ಓದಿ: ರೇವ್ ಪಾರ್ಟಿ ಸಂಕಷ್ಟ- ಹೇಮಾ ಕೂದಲು ಸ್ಯಾಂಪಲ್ ಟೆಸ್ಟ್‌ಗೆ ಮುಂದಾದ ಪೊಲೀಸ್ರು

ವಾಸು ಎಂಬಾತನ ಹುಟ್ಟುಹಬ್ಬದ ಅಂಗವಾಗಿ Sunset To Sun Rise victory ಶೀರ್ಷಿಕೆಯಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ನೂರರಿಂದ ನೂರೈವತ್ತು ಮಂದಿ ಜಮಾವಣೆಗೊಂಡಿದ್ದರು ಎನ್ನಲಾಗಿದೆ.

Share This Article