ಕೊಹ್ಲಿ, ರೋಹಿತ್‌ ಶರ್ಮಾ ಬೆನ್ನಲ್ಲೇ T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ಜಡೇಜಾ ವಿದಾಯ

Public TV
1 Min Read

ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಂತರ ಭಾರತ ತಂಡದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ (Ravindra Jadeja) ಕೂಡ T20 ಅಂತರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ. ಇನ್‌ಸ್ಟಾಗ್ರಾಂ ಪೋಸ್ಟ್ ಮೂಲಕ ಜಡೇಜಾ ಈ ಮಾಹಿತಿಯನ್ನು ನೀಡಿದ್ದಾರೆ.

 

View this post on Instagram

 

A post shared by Ravindrasinh jadeja (@royalnavghan)

 

ಇನ್‌ಸ್ಟಾದಲ್ಲಿ ಏನಿದೆ..?: ನಾನು T20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತೇನೆ. ನಾನು ಯಾವಾಗಲೂ ನನ್ನ ದೇಶಕ್ಕಾಗಿ ಮತ್ತು ಇತರ ಫಾರ್ಮ್ಯಾಟ್‌ಗಳಲ್ಲಿ ನನ್ನ ಅತ್ಯುತ್ತಮವಾದುದನ್ನು ನೀಡಿದ್ದೇನೆ. ಮುಂದೆ ಅದನ್ನು ಮುಂದುವರಿಸುತ್ತೇನೆ. ಟಿ 20 ವಿಶ್ವಕಪ್ ಗೆಲ್ಲುವುದು ನನ್ನ ಕನಸು ನನಸಾಯಿತು. ನೆನಪುಗಳು, ಉತ್ಸಾಹ ಮತ್ತು ಅಚಲ ಬೆಂಬಲಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕೊಹ್ಲಿ ಜೊತೆಗೆ ಟಿ20 ವಿಶ್ವಕಪ್‌ಗೆ ವಿದಾಯ ಹೇಳಿದ ಹಿಟ್‌ಮ್ಯಾನ್‌

ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದ್ದ 2024ರ ಟಿ20 ವಿಶ್ವಕಪ್‌ನಲ್ಲಿ ರವೀಂದ್ರ ಜಡೇಜಾ ಅವರಿಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಪ್ರಭಾವ ಬೀರಲು ವಿಫಲರಾದರು. ಪ್ರಸಕ್ತ ಟೂರ್ನಿಯಲ್ಲಿ ಅವರು ಒಟ್ಟು 8 ಪಂದ್ಯಗಳನ್ನು ಆಡಿದ್ದು‌, ಕೇವಲ 35 ರನ್ ಗಳಿಸಿದ್ದಾರೆ. ಅದೇ ಸಮಯದಲ್ಲಿ ಅವರು ಕೇವಲ ಒಂದು ವಿಕೆಟ್ ಪಡೆದರು.

Share This Article