ಮಾಲ್ಡೀವ್ಸ್‌ನಲ್ಲಿ ಸ್ಪೀಡ್ ಬೋಟ್ ಅಪಘಾತ – ರೇಮಂಡ್ಸ್ ಮುಖ್ಯಸ್ಥ ಗೌತಮ್ ಸಿಂಘಾನಿಯಾಗೆ ಗಾಯ

2 Min Read

– ಇಬ್ಬರು ಭಾರತೀಯರು ನಾಪತ್ತೆ

ಮಾಲೆ: ಮಾಲ್ಡೀವ್ಸ್‌ನಲ್ಲಿ (Maldives) ಸ್ಪೀಡ್ ಬೋಟ್ (Speed Boat) ಮಗುಚಿ ಬಿದ್ದ ಪರಿಣಾಮ ರೇಮಂಡ್ ಗ್ರೂಪ್ (Raymond Group) ಅಧ್ಯಕ್ಷ ಗೌತಮ್ ಸಿಂಘಾನಿಯಾ (Gautam Singhania) ಗಾಯಗೊಂಡಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿದ್ದಾರೆ.

ಘಟನೆಯಲ್ಲಿ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮುಂಬೈಗೆ ಮರಳಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ. ಶುಕ್ರವಾರ ಮುಂಜಾನೆ ಮಾಲ್ಡೀವ್ಸ್‌ನ ವಿ ಫೆಲಿಧೂ ಪ್ರದೇಶದ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಏಕಾಏಕಿ ಮಗುಚಿ ಬಿದ್ದಿದೆ. ಅಪಘಾತ ಸಂಭವಿಸುವಾಗ ಬೋಟ್‌ನಲ್ಲಿ ಒಟ್ಟು ಏಳು ಮಂದಿ ಇದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ದಾವಣಗೆರೆ ದಕ್ಷಿಣ: ಲಿಂಗಾಯತ v/s ಮುಸ್ಲಿಂ ಸಮುದಾಯ ನಾಯಕರ ನಡುವೆ ಕದನ – ಯಾರಿಗೆ ಟಿಕೆಟ್?

ಅಪಘಾತದ ನಂತರ ಗೌತಮ್ ಸಿಂಘಾನಿಯಾ ಅವರನ್ನು ತಕ್ಷಣ ರಕ್ಷಿಸಿ ಏರ್ ಲಿಫ್ಟ್ ಮಾಡಿ ಮುಂಬೈಗೆ ಕರೆತರಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗೌತಮ್ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮುಂಬೈನಲ್ಲಿ ಅವರಿಗೆ ಸೂಕ್ತ ಆರೈಕೆ ನೀಡಲಾಗುತ್ತಿದೆ. ನಿಮ್ಮೆಲ್ಲರ ಹಾರೈಕೆಗಳಿಗೆ ನಾವು ಧನ್ಯವಾದ ಹೇಳುತ್ತೇವೆ ಎಂದು ಅವರ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಜೂಜಾಡುವ ವೇಳೆ ಪೊಲೀಸರ ದಾಳಿ – ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಮಾಲ್ಡೀವ್ಸ್ ಅಧಿಕಾರಿಗಳ ಪ್ರಕಾರ, ಈ ಬೋಟ್‌ನಲ್ಲಿ ಯುನೈಟೆಡ್ ಕಿಂಗ್‌ಡಮ್ ಮತ್ತು ರಷ್ಯಾದ ಇಬ್ಬರು ಮಹಿಳೆಯರು ಹಾಗೂ ಐದು ಭಾರತೀಯ ಪುರುಷರು ಇದ್ದರು. ಅಪಘಾತದ ವೇಳೆ ರಷ್ಯಾದ ಮಹಿಳೆ ಸೇರಿದಂತೆ ನಾಲ್ವರು ಭಾರತೀಯರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದಾರೆ. ಇವರಲ್ಲಿ ಇಬ್ಬರು ಭಾರತೀಯರು ಇನ್ನೂ ನಾಪತ್ತೆಯಾಗಿದ್ದು, ಅವರಲ್ಲಿ ಭಾರತದ ಖ್ಯಾತ ರ‍್ಯಾಲಿ ಚಾಲಕ ಹರಿ ಸಿಂಗ್ ಮತ್ತು ಅವರೊಂದಿಗೆ ದೋಣಿಯಲ್ಲಿದ್ದ ಮತ್ತೊಬ್ಬ ಸ್ನೇಹಿತ ಕೂಡ ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಕಲಘಟಗಿ, ಯಲ್ಲಾಪುರ ಮಾರ್ಗದಲ್ಲಿ ಸಂಚಾರ ನಿಷೇಧ

ಸ್ಥಳೀಯ ಪೊಲೀಸ್ ಮತ್ತು ರಕ್ಷಣಾ ತಂಡಗಳು ಶೋಧ ಕಾರ್ಯವನ್ನು ವಿಸ್ತರಿಸಿದ್ದು, ಅವರನ್ನು ಸುರಕ್ಷಿತವಾಗಿ ಪತ್ತೆಹಚ್ಚುವ ಪ್ರಯತ್ನ ಮುಂದುವರಿದಿದೆ. ಸಮುದ್ರದ ಅಲೆಗಳು ಹೆಚ್ಚಾಗಿರುವ ಕಾರಣ ಅವರನ್ನು ಹುಡುಕುವುದು ಕಷ್ಟಕರವಾಗಿದೆ ಎಂದು ಮಾಲ್ಡೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆಗಳು ತಿಳಿಸಿವೆ. ಇದನ್ನೂ ಓದಿ: ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ

Share This Article