IPL 2023: ಕಣಕ್ಕಿಳಿಯಲು RCB, CSK ಬಲಿಷ್ಠ ತಂಡ ರೆಡಿ – ಈ ಸಲ ಕಪ್ ಯಾರದ್ದು?

Public TV
3 Min Read

ಬೆಂಗಳೂರು: ಮಾರ್ಚ್ 31 ರಿಂದ 16ನೇ ಆವೃತ್ತಿಯ ಐಪಿಎಲ್ (IPL 2023) ಆರಂಭವಾಗುತ್ತಿದ್ದು, ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ (GT) ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಸೆಣಸಲಿವೆ.

ಐಪಿಎಲ್ ಆರಂಭಕ್ಕೆ ದಿನಗಣನೆ ಬಾಕಿಯಿರುವಾಗಲೇ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (BCB) ತಂಡಗಳು ಬಲಿಷ್ಠ ತಂಡದ ಪಟ್ಟಿಯನ್ನ ಬಿಡುಗಡೆ ಮಾಡಿವೆ. ಇದನ್ನೂ ಓದಿ: IPL 2023: ಈ ಬಾರಿ ಸಿಎಸ್‌ಕೆ ಕಪ್ ಗೆಲ್ಲಲ್ಲ, ಆರ್‌ಸಿಬಿ ಗೆದ್ದರೆ ಖುಷಿ – ಭಾರತದ ಮಾಜಿ ಕ್ರಿಕೆಟಿಗ ಭವಿಷ್ಯ

ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿಯವರ (Virat Kohli) ಅದ್ಭುತ ಫಾರ್ಮ್ನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಕನಸಿನೊಂದಿಗೆ ಕಣಕ್ಕಿಳಿಯುತ್ತಿದೆ. ಇಲ್ಲಿಯವರೆಗೂ ಬೆಂಗಳೂರು ಮೂಲದ ತಂಡ ಐಪಿಎಲ್ ಟೂರ್ನಿಯಲ್ಲಿ ಒಮ್ಮೆಯೂ ಚಾಂಪಿಯನ್ ಆಗಿಲ್ಲ. ಆದ್ದರಿಂದ ಈ ಬಾರಿ ತನ್ನ ಪ್ರಶಸ್ತಿ ಗೆಲುವಿನ ಬರ ನೀಗಿಸಿಕೊಳ್ಳಲಿದೆಯೇ ಎಂಬುದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ: IPL 2023: RCB ತಂಡಕ್ಕೆ ಆನೆ ಬಲ – ವಿಲ್‌ ಜಾಕ್ಸ್‌ ಬದಲಿಗೆ ಕಿವೀಸ್‌ ಸ್ಟಾರ್‌ ಆಲ್‌ರೌಂಡರ್‌ ಸೇರ್ಪಡೆ

2022ರ ಐಪಿಎಲ್ ಟೂರ್ನಿಯಲ್ಲಿ ಕೊಹ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನದ ಹೊರತಾಗಿಯೂ ಆರ್‌ಸಿಬಿ ಪ್ಲೇ ಆಫ್‌ಗೆ ಪ್ರವೇಶಿತ್ತು. ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದು, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ತಾನ್ ರಾಯಲ್ಸ್ ವಿರುದ್ಧ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್‌ಸಿಬಿ ಸೋತು ನಿರಾಶೆ ಅನುಭವಿಸಿತ್ತು.

ಕಳೆದ ಬಾರಿ ಪ್ಲೆ ಆಫ್‌ನಿಂದ ಹೊರಗುಳಿದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಹಲವು ಆಟಗಾರರ ಬದಲಾವಣೆಯೊಂದಿಗೆ ಬಲಿಷ್ಠ ತಂಡವಾಗಿ ಹೊರಹೊಮ್ಮಿದೆ. 16.25 ಕೋಟಿ ರೂ. ದುಬಾರಿ ಬೆಲೆಗೆ ಬಿಕರಿಯಾದ ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಬೆನ್‌ಸ್ಟೋಕ್ಸ್ ಸಹ ಸಿಎಸ್‌ಕೆ ತಂಡಲ್ಲಿದ್ದು, ಆನೆಬಲ ಬಂದಂತಾಗಿದೆ.

ಅಲ್ಲದೇ ಈಗಾಗಲೇ ಟಿ20, ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ಗಳಲ್ಲಿ ನಿವೃತ್ತಿಯಾಗಿರುವ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಎಂ.ಎಸ್ ಧೋನಿ (MS Dhoni) ಈ ಬಾರಿ ಕೊನೆಯ ಐಪಿಎಲ್ ಆಡಲಿದ್ದಾರೆ. ಆದ್ದರಿಂದ ಚೆನ್ನೈ ತಂಡ ಮಾಹಿಗೆ ಗೆಲುವಿನ ವಿದಾಯ ನೀಡಲು ಕಪ್ ಗೆಲ್ಲಲ್ಲೇಬೇಕೆಂದು ಪಣ ತೊಟ್ಟಿದೆ.

ಆರ್‌ಸಿಬಿ ತಂಡದ ಬಲಿಷ್ಠ ಪ್ಲೇಯಿಂಗ್ -11:
ಫಾಫ್ ಡು ಪ್ಲೆಸಿಸ್ (ನಾಯಕ, ಓಪನರ್) ವಿರಾಟ್ ಕೊಹ್ಲಿ (ಓಪನರ್), ರಜತ್ ಪಾಟಿದಾರ್ (ಬ್ಯಾಟ್ಸ್ಮನ್), ಗ್ಲೆನ್ ಮ್ಯಾಕ್ಸ್ವೆಲ್ (ಆಲ್‌ರೌಂಡರ್), ಮಹಿಪಾಲ್ ಲೊಮ್ರೋರ್ (ಬ್ಯಾಟ್ಸ್ಮನ್), ದಿನೇಶ್ ಕಾರ್ತಿಕ್ (ವಿ.ಕೀ), ಶಹಬಾಝ್ ಅಹ್ಮದ್ (ಆಲ್‌ರೌಂಡರ್), ವಾನಿಂದು ಹಸರಂಗ (ಆಲ್‌ರೌಂಡರ್), ಹರ್ಷಲ್ ಪಟೇಲ್ (ವೇಗದ ಬೌಲರ್), ಜೋಶ್ ಹೇಝಲ್‌ವುಡ್ (ವೇಗದ ಬೌಲರ್), ಮೊಹಮ್ಮದ್ ಸಿರಾಜ್ (ವೇಗದ ಬೌಲರ್).

ಟೂರ್ನಿಗೆ ಆರ್‌ಸಿಬಿ ತಂಡ:
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್(ವಿ.ಕೀ), ಅನುಜ್ ರಾವತ್, ಫಿನ್ ಆಲೆನ್, ಗ್ಲೆನ್ ಮ್ಯಾಕ್ಸ್ವೆಲ್, ವಾನಿಂದು ಹಸರಂಗ, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲೀ, ಕರಣ್ ಶರ್ಮಾ, ಮಹಿಪಾಲ್ ಲೊಮ್ರೋರ್, ಮೊಹಮ್ಮದ್ ಸಿರಾಜ್, ಜಾಶ್ ಹೇಝಲ್‌ವುಡ್, ಸಿದ್ದಾರ್ಥ್ ಕೌಲ್, ಆಕಾಶ್ ದೀಪ್, ರೀಸ್ ಟಾಪ್ಲಿ, ಹಿಮಾಂಶು ಶರ್ಮಾ, ಮೈಕಲ್ ಬ್ರೇಸ್‌ವೆಲ್, ಮನೋಜ್ ಭಾಂಡಗಿ, ರಾಜನ್ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್.

ಚೆನ್ನೈ ಸೂಪರ್ ಕಿಂಗ್ಸ್ನಲ್ಲಿ ಪ್ಲೇಯಿಂಗ್-11:
ಎಂ.ಎಸ್.ಧೋನಿ (ನಾಯಕ), ಡಿವೋನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಬೆನ್ ಸ್ಟೋಕ್ಸ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಮ್ ದುಬೆ, ರವೀಂದ್ರ ಜಡೇಜಾ, ದೀಪಕ್ ಚಹಾರ್, ಮಹೇಶ್ ತೀಕ್ಷಣ ಹಾಗೂ ಮುಖೇಶ್ ಛೌಧರಿ.

ಟೂರ್ನಿಗೆ ಸಿಎಸ್‌ಕೆ ತಂಡ:
ಎಂ.ಎಸ್ ಧೋನಿ (ನಾಯಕ), ಡಿವೊನ್ ಕಾನ್ವೇ, ಋತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್, ಮುಖರ್ ದೇಶ್‌ಗಾವ್, ತುಷಾರ್ ದೇಶ್‌ಗಾವ್, ತುಷಾರ್ ದೇಶ್‌ಗಾವ್, , ಮಥೀಶ ಪತಿರಾನ, ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಶೇಕ್ ರಶೀದ್, ನಿಶಾಂತ್ ಸಿಧು, ಅಜಯ್ ಮಂಡಲ್, ಸಿಸಂದ ಮಗಳ.

Share This Article
Leave a Comment

Leave a Reply

Your email address will not be published. Required fields are marked *