ಚಿನ್ನಸ್ವಾಮಿ ಕಾಲ್ತುಳಿತ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ

By
2 Min Read

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ಸಂಭವಿಸಿದ ಕಾಲ್ತುಳಿತದಲ್ಲಿ (Stampede )ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ (Royal Challengers Bengaluru) ತಲಾ 25 ಲಕ್ಷ ರೂ. ಪರಿಹಾರ (Compensation) ಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್‌ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ.

ಈ ಸಂಬಂಧ ಆರ್‌ಸಿಬಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಜೂ.4 2025ರ ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ, ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು. ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಶಕ್ತಿ. ಅದು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ – ಅಭಿಮಾನಿಗಳಿಗೆ ಕೇರ್‌ ಸೆಂಟರ್‌ ತೆರೆಯಲಿದೆ ಆರ್‌ಸಿಬಿ

ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ. ಜಾಗವನ್ನು ಯಾವ ಸಹಾಯವೂ ತುಂಬಲಾರದು. ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂ. ನೆರವು ನೀಡುತ್ತಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ, ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆಯಾಗಿದೆ.

ಇದು ಆರ್‌ಸಿಬಿ ಕೇರ್ಸ್‍ನ ಆರಂಭವೂ ಹೌದು. ಅವರ ನೆನಪನ್ನೂ ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ಬದ್ಧತೆಯಾಗಿದೆ ಎಂದು ಪೋಸ್ಟ್‍ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದೆ.

ಏನಿದು ದುರ್ಘಟನೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 18 ವರ್ಷಗಳ ಬಳಿಕ ಐಪಿಎಲ್ (IPL) ಚಾಂಪಿಯನ್ ಪಟ್ಟವನ್ನ ಮುಡಿಗೇರಿಸಿಕೊಂಡಿತ್ತು. ಆರ್‌ಸಿಬಿ ಫ್ಯಾನ್ಸ್‌ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಜೂ.4 ಸಂಭ್ರಮಾಚರಣೆಗೆ ಬಂದಿದ್ದಾಗ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 11 ಮಂದಿ ಸಾವಿಗೀಡಾಗಿದ್ದರು. ಉಚಿತ ಪ್ರವೇಶ ಘೋಷಣೆಯಿಂದ ಮಿತಿಮೀರಿದ ಜನ ಬಂದಿದ್ದರಿಂದ ಈ ಅವಘಡ ನಡೆದಿತ್ತು. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

Share This Article