ಈ ಸಲ ಕಪ್ ನಮ್ದು – ಆರ್‌ಸಿಬಿ ದಿಗ್ವಿಜಯಕ್ಕೆ ಸಿದ್ದರಾಮಯ್ಯ, ಡಿಕೆಶಿ, ಹೆಚ್‌ಡಿಕೆ ಅಭಿನಂದನೆ

Public TV
2 Min Read

– ಆರ್‌ಸಿಬಿ ಹುಡುಗರು ಅಭಿಮಾನಿಗಳ ಕನಸು ನನಸಾಗಿಸಿದ್ದಾರೆ: ಸಿಎಂ

ಪಿಎಲ್‌ ಚಾಂಪಿಯನ್‌ ಪಟ್ಟಕ್ಕೇರಿದ ಆರ್‌ಸಿಬಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಿಎಂ ಸಿದ್ದರಾಮಯ್ಯ, ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಡಿಸಿಎಂ ಡಿ.ಕೆ ಶಿವಕುಮಾರ್‌, ಈ ಸಲಾ ಕಪ್ ನಮ್ದೇ, ನೀವು ಪ್ರತಿಯೊಬ್ಬ ಕನ್ನಡಿಗನ ಕನಸನ್ನು ನನಸಾಗಿಸಿದ್ದೀರಿ ಎಂದು ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ, ವೀಡಿಯೋ ಹಂಚಿಕೊಂಡಿರುವ ಹೆಚ್‌ಡಿಕೆ, ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ, ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ, ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ಕೋಹ್ಲಿಯವರಿಗೆ ಅಭಿನಂದಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

Share This Article