ಆರ್‌ಸಿಬಿ ಹುಡುಗರು ಕರ್ನಾಟಕಕ್ಕೆ ಗೌರವ, ಹೆಮ್ಮೆ ತಂದಿದ್ದಾರೆ: ಡಿಕೆಶಿ

Public TV
1 Min Read

ಬೆಂಗಳೂರು: ಆರ್‌ಸಿಬಿ (RCB) ಹುಡುಗರು ನಮ್ಮ ಕರ್ನಾಟಕಕ್ಕೆ ಗೌರವ ಹಾಗೂ ಹೆಮ್ಮೆ ತಂದಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಆರ್‌ಸಿಬಿ ತಂಡಕ್ಕೆ ಶುಭಾಶಯ ಕೋರಿದ್ದಾರೆ.

ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಮಣಿಸಿ ಕಪ್ ಗೆದ್ದ ಆರ್‌ಸಿಬಿ ತಂಡದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್‌ಸಿಬಿ ತಂಡವನ್ನು ನಾವು ಗೌರವಿಸಬೇಕು. ಯಾವ ರೀತಿ ಅವರನ್ನು ಗೌರವಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಟ್ರಾಫಿಕ್‌ಗೂ ಸಮಸ್ಯೆ ಆಗಬಾರದು, ಸಾಕಷ್ಟು ಯುವಕರು ಭಾಗವಹಿಸುತ್ತಾರೆ ಎಂದರು. ಇದನ್ನೂ ಓದಿ: ಮಧ್ಯಾಹ್ನ ಬೆಂಗಳೂರಿಗೆ ಚಾಂಪಿಯನ್ಸ್ – ಸಂಜೆ ವಿಜಯೋತ್ಸವ ಮೆರವಣಿಗೆ | ಎಷ್ಟು ಗಂಟೆಗೆ ಏನು?

ಅವರು ಶೆಡ್ಯೂಲ್ ಹಾಕಿಕೊಳ್ಳುತ್ತಾರೆ. ಆದರೆ ಕಂಟ್ರೋಲ್ ಮಾಡೋದು ನಾವು. ಗೃಹ ಸಚಿವರು, ಪೊಲೀಸ್ ಕಮೀಷನರ್ ಎಲ್ಲಾ ಕೂತು ಮಾತನಾಡಿ ಈ ಬಗ್ಗೆ ನಿರ್ಧಾರ ಮಾಡುತ್ತಾರೆ. ನಾನು ಕೂಡ ಸಂಪೂರ್ಣ ಮ್ಯಾಚ್ ನೋಡಿದ್ದೇನೆ. ಆರ್‌ಸಿಬಿ ಟೀಂ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರಿಗೆ ಸನ್ಮಾನ ಮಾಡುವ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್

Share This Article