ನಮ್ಮ ಬ್ಲಡ್‌ ಗ್ರೂಪ್‌ RCB ಪಾಸಿಟಿವ್‌ – ಫ್ಯಾನ್ಸ್‌ ಪೋಸ್ಟರ್‌ ವೈರಲ್‌

By
1 Min Read

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಕೆಕೆಆರ್‌ (KKR) ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ 21 ರನ್‌ಗಳ ಅಂತರದಿಂದ ಸೋತಿತು.

ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್‌ ಟೂರ್ನಿಯಲ್ಲಿ ಆರ್‌ಸಿಬಿ ತಂಡಕ್ಕೆ ಸಾಕಷ್ಟು ಟ್ರೆಂಡ್‌ ಇದೆ. ಇಲ್ಲಿಯವರೆಗೂ ಒಂದೇ ಒಂದು ಬಾರಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದೇ ಇದ್ದರೂ ಆರ್‌ಸಿಬಿ, ಇತರೆ ಎಲ್ಲಾ ತಂಡಗಳಿಗಿಂತಲೂ ಅತ್ಯಂತ ಹೆಚ್ಚಿನ ಅಭಿಮಾನಿಗಳನ್ನ ಹೊಂದಿದೆ.

ಫೇಸ್‌ಬುಕ್‌, ಇನ್ಸ್ಟಾಗ್ರಾಮ್‌, ಟ್ವಿಟರ್ ಸೇರಿದಂತೆ ಸೋಶಿಯಲ್‌ ಮೀಡಿಯಾದಲ್ಲಿ ಕೋಟ್ಯಂತರ ಫಾಲೋವರ್ಸ್ ಇದ್ದಾರೆ. ಪಂದ್ಯ ಗೆದ್ದರೂ, ಸೋತರೂ ಆರ್‌ಸಿಬಿ ತಂಡವನ್ನ ಬೆಂಬಲಿಸುವ ಪ್ರಾಮಾಣಿಕ ಅಭಿಮಾನಿಗಳು (RCB Fans) ಇವರಾಗಿದ್ದಾರೆ. ಇದನ್ನೂ ಓದಿ: ಕಳಪೆ ಫೀಲ್ಡಿಂಗ್‌ಗೆ ಬೆಂಗಳೂರು ಬಲಿ – ಕೋಲ್ಕತ್ತಾಗೆ 21 ರನ್‌ಗಳ ಜಯ

ಪ್ರತಿ ಮ್ಯಾಚ್‌ ನಡೆದಾಗಲೂ ಆರ್‌ಸಿಬಿ ಅಭಿಮಾನಿಗಳು ಸುದ್ದಿಯಲ್ಲಿರುತ್ತಾರೆ. ಅದರಂತೆ ಕೆಕೆಆರ್‌ ವಿರುದ್ಧ ಪಂದ್ಯ ನಡೆಯುವಾಗ ಅಭಿಮಾನಿಗಳು ʻನಮಗೆ ಆರ್‌ಸಿಬಿ ಶಾಶ್ವತ, ನಮ್ಮ ಬ್ಲಡ್‌ ಗ್ರೂಪ್‌ ಸಹ ಆರ್‌ಸಿಬಿ ಪಾಸಿಟಿವ್‌ʼ ಎಂದು ಬರೆದು ಹಿಡಿದುಕೊಂಡಿದ್ದ ಪೋಸ್ಟರ್‌ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ 17 ಓವರ್‌ ಮುಗಿಯುತ್ತಿದ್ದಂತೆ ಆರ್‌ಸಿಬಿಗೆ ಸೋಲು ಖಚಿತವಾಯಿತು. ಈ ವೇಳೆ ಅಸಮಾಧಾನಗೊಂಡ ಅಭಿಮಾನಿಗಳು ಕೆಕೆಆರ್‌ ತಂಡದ ನಾಯಕನ ವಿರುದ್ಧವೂ ತಿರುಗಿಬಿದ್ದಿದ್ದರು. ʻನಿತೀಶ್‌ ಪ್ಲೀಸ್‌ ಗೆಟ್‌ಔಟ್‌, ನೀವು ನಮ್ಮ ಡ್ರೀಮ್‌-11ನಲ್ಲಿ ಇಲ್ಲʼ ಎಂದು ಪೋಸ್ಟರ್‌ ಹಿಡಿದು ಪ್ರದರ್ಶಿಸಿದರು. ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ ʻಕಾಂತಾರʼ ಸಾಂಗ್‌ – RCB ಗೆಲುವಿಗೆ ದೈವ ಕಾರಣ ಅಂದ್ರು ಫ್ಯಾನ್ಸ್‌

ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಕೆಕೆಆರ್‌ ತಂಡ 200 ರನ್‌ಗಳ ಬೃಹತ್‌ ಮೊತ್ತ ಪೇರಿಸಿತ್ತು. 201 ರನ್‌ ಗುರಿ ಬೆನ್ನತ್ತಿದ್ದ ಆರ್‌ಸಿಬಿ ತಂಡ 8 ವಿಕೆಟ್‌ ನಷ್ಟಕ್ಕೆ 179 ರನ್‌ ಗಳಿಸಿ 21 ರನ್‌ಗಳಿಂದ ಸೋಲನುಭವಿಸಿತು.

Share This Article