For The First Time ಫೈನಲ್‌ ಪಂದ್ಯದಲ್ಲಿ ಬ್ಯಾಟಿಂಗ್‌ಗೆ ಇಳಿದ ಆರ್‌ಸಿಬಿ – ಇಂದಿನ ಲಕ್‌ ಹೇಗಿದೆ?

Public TV
3 Min Read

– ಚೇಸಿಂಗ್‌ ಮಾಡಿದ್ದ ಮೂರು ಪಂದ್ಯಗಳಲ್ಲೂ ವಿರೋಚಿತ ಸೋಲು

ಅಹಮದಾಬಾದ್‌: ಇಲ್ಲಿ ನಡೆಯುತ್ತಿರುವ 18ನೇ ಆವೃತ್ತಿಯ ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ (Punjab Kings) ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿದೆ. ಇದರಿಂದ ಆರ್‌ಸಿಬಿ (RCB) ಮೊದಲು ಬ್ಯಾಟಿಂಗ್‌ ಮಾಡಲು ಕ್ರೀಸ್‌ಗಿಳಿದಿದೆ.

ಇನ್ನೂ ನಾಲ್ಕನೇ ಬಾರಿ ಫೈನಲ್‌ ಪ್ರವೇಶಿಸಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಫೈನಲ್‌ ಪಂದ್ಯದಲ್ಲಿ ಇದೇ ಮೊದಲಬಾರಿಗೆ ಬ್ಯಾಟಿಂಗ್‌ ಮಾಡುತ್ತಿದೆ. ಆದ್ರೆ ಹಿಂದೆ ಚೇಸಿಂಗ್‌ ಮಾಡಿದ್ದ ಮೂರು ಫೈನಲ್‌ ಪಂದ್ಯಗಳಲ್ಲೂ ಆರ್‌ಸಿಬಿ ಚೇಸಿಂಗ್‌ (Chasing) ಮಾಡಿತ್ತು ಎಂಬುದೇ ಗಮನಾರ್ಹ.

ಹೌದು. 2009ರಲ್ಲಿ ಮೊದಲ ಬಾರಿಗೆ ಫೈನಲ್‌ಗೆ ಎಂಟ್ರಿ ಕೊಟ್ಟಿದ್ದ ಆರ್‌ಸಿಬಿ ಡೆಕ್ಕನ್‌ ಚಾರ್ಜಸ್‌ ವಿರುದ್ಧ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಚೇಸಿಂಗ್‌ ಮಾಡಿತ್ತು. 2011ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ವಿರುದ್ಧ ಟಾಸ್‌ ಸೋತಿದ್ದ ಆರ್‌ಸಿಬಿ ಮೊದಲು ಚೇಸಿಂಗ್‌ಗೆ ಇಳಿಯಬೇಕಾಯಿತು. 2016ರಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ನಡೆದ ಫೈನಲ್‌ ಪಂದ್ಯದಲ್ಲೂ ಟಾಸ್‌ ಸೋತಿದ್ದ ಆರ್‌ಸಿಬಿ ಚೇಸಿಂಗ್‌ ಮಾಡಬೇಕಾಯಿತು. ಆದ್ರೆ ಈ ಮೂರು ಫೈನಲ್‌ ಪಂದ್ಯಗಳಲ್ಲೂ ಸೋತಿತ್ತು. ಇಂದಿನ ಫೈನಲ್‌ ಪಂದ್ಯದಲ್ಲಿ ಟಾಸ್‌ ಸೋತ ಆರ್‌ಸಿಬಿ ಮೊದಲು ಬ್ಯಾಟಿಂಗ್‌ ಮಾಡಲು ಮುಂದಾಗಿದೆ. 18ರ ನಂಟು ಹೊಂದಿರುವ ಆರ್‌ಸಿಬಿ ಈ ಬಾರಿಯಾದರೂ ಕಪ್‌ ಗೆಲ್ಲಲಿ ಅನ್ನೋದು ಕೋಟ್ಯಂತರ ಅಭಿಮಾನಿಗಳ ಹೆಬ್ಬಯಕೆಯಾಗಿದೆ.

ಮೂರು ಫೈನಲ್‌ ಪಂದ್ಯಗಳ ರೋಚಕ ಇತಿಹಾಸ ಹೇಗಿದೆ ನೋಡಿ….

ಫೈನಲ್‌ನಲ್ಲಿ ವಿರೋಚಿತ ಸೋಲು
2009ರ ಆವೃತ್ತಿಯಲ್ಲೂ 8 ತಂಡಗಳು ಭಾಗವಹಿಸಿದ್ದವು. 2ನೇ ಆವೃತ್ತಿಯಲ್ಲಿ ಆರ್‌ಸಿಬಿ ಪುಟಿದೆದ್ದಿತ್ತು. 14 ಪಂದ್ಯಗಳಲ್ಲಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿ 16 ಅಂಕ ಗಳಿಸಿ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿತ್ತು. ಆಗ ಎಲಿಮಿನೇಟರ್ ಪಂದ್ಯ ಇರಲಿಲ್ಲ, 2 ಸೆಮಿಫೈನಲ್ ಪಂದ್ಯಗಳು ಮಾತ್ರ ಇದ್ದವು. ಮೊದಲ ಸೆಮಿಫೈನಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ (ಇಂದಿನ ಡೆಲ್ಲಿ ಕ್ಯಾಪಿಟಲ್ಸ್), ಹೈದರಾಬಾದ್ ಡೆಕ್ಕನ್ ಚಾರ್ಜಸ್ ಕಾದಾಟ ನಡೆಸಿದ್ರೆ, 2ನೇ ಸೆಮಿಸ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಸೆಣಸಾಡಿತ್ತು. ಈ ವೇಳೆ ಸೆಮಿಸ್‌ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿದ್ದ ಆರ್‌ಸಿಬಿ ಫೈನಲ್‌ನಲ್ಲಿ ಡೆಕ್ಕನ್ ಚಾರ್ಜಸ್ ವಿರುದ್ಧ 6 ರನ್‌ಗಳ ಅಂತರದಿಂದ ಸೋಲು ಕಂಡಿತ್ತು. ಟ್ರೋಫಿ ಗೆಲ್ಲುವ ಕನಸೂ ಕಮರಿತ್ತು.

ಚೆನ್ನೈ ವಿರುದ್ಧ ಎರಡೆರಡುಬಾರಿ ಸೋಲು
2011ರ ಆವೃತ್ತಿ ಆರ್‌ಸಿಬಿ ಪಾಲಿಗೆ ಅತ್ಯಂತ ರೋಚಕ ಘಟ್ಟ. ಲೀಗ್ ಸುತ್ತಿನಲ್ಲಿ 14ರಲ್ಲಿ 9 ಪಂದ್ಯ ಗೆದ್ದು ಪ್ಲೇ ಆಫ್ ಪ್ರವೇಶಿಸಿತ್ತು. ಈ ವೇಳೆಗೆ ಪ್ಲೇ ಆಫ್ ಸ್ವರೂಪ ಸಂಪೂರ್ಣ ಬದಲಾಗಿತ್ತು. ಮೊದಲ ಸೆಮಿಫೈನಲ್‌ನಲ್ಲಿ ಚೆನ್ನೈ ವಿರುದ್ಧ 6 ವಿಕೆಟ್‌ಗಳ ಹೀನಾಯ ಸೋಲು ಕಂಡಿದ್ದ ಆರ್‌ಸಿಬಿಗೆ ಮತ್ತೊಂದು ಅವಕಾಶ ಸಿಕ್ಕಿತ್ತು. ಆಗ 2ನೇ ಕಾಲಿಫೈಯರ್ ಪಂದ್ಯದಲ್ಲಿ ಮುಂಬೈ ವಿರುದ್ಧ ಭರ್ಜರಿ ಗೆಲುವು ಕಂಡಿದ್ದ ಆರ್‌ಸಿಬಿ ಪುನಃ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 58 ರನ್‌ಗಳಿಂದ ಸೋಲು ಕಂಡಿತ್ತು. ಆಗ ಚೆನ್ನೈ ಸೂಪರ್ ಕಿಂಗ್ಸ್ ಸತತ 2ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತ್ತು.

8 ರನ್‌ಗಳಿಂದ ಕೈತಪ್ಪಿದ ಟ್ರೋಫಿ
2016 ಐಪಿಎಲ್ ಆವೃತ್ತಿ ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಹಬ್ಬವಾಗಿತ್ತು. ಅಂಕಪಟ್ಟಿಯಲ್ಲಿ ಟಾಪ್-2 ಸ್ಥಾನದೊಂದಿಗೆ ಪ್ಲೇ ಆಫ್ ಪ್ರವೇಶಿಸಿದ್ದ ಆರ್‌ಸಿಬಿ ಮೊದಲ ಕ್ವಾಲಿಫೈಯರ್‌ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಫೈನಲ್ ತಲುಪಿತ್ತು. ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ನಷ್ಟಕ್ಕೆ 208 ರನ್ ಸಿಡಿಸಿತ್ತು. ಆದ್ರೆ ಚೇಸಿಂಗ್ ಮಾಡಿದ್ದ ಆರ್‌ಸಿಬಿ ಕ್ರಿಸ್‌ಗೇಲ್ ಮತ್ತು ಕಿಂಗ್ ಕೊಹ್ಲಿ ಆರ್ಭಟದ ಹೊರತಾಗಿ 8 ರನ್‌ಗಳ ವಿರೋಚಿತ ಸೋಲು ಅನುಭವಿಸಿತು. ಆಗ ಸನ್ ರೈಸರ್ಸ್ ಡೇವಿಡ್ ವಾರ್ನರ್ ನಾಯಕತ್ವದಲ್ಲಿ ಟ್ರೋಫಿ ಎತ್ತಿ ಹಿಡಿದಿತ್ತು.

Share This Article