– ಆರ್‌ಸಿಬಿ ವೆಬ್‌ಸೈಟ್, ಆ್ಯಪ್‌ನಲ್ಲಿ ಟಿಕೆಟ್ ಲಭ್ಯ
ಬೆಂಗಳೂರು: 2026ರ ಐಪಿಎಲ್ ಟೂರ್ನಿಗೆ (IPL 2026) ಕೌಂಟ್ ಡೌನ್ ಶುರುವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೊದಲ ಹಂತದ ಪಂದ್ಯಗಳ ಟಿಕೆಟ್ ಮಾರಾಟ ಸದ್ಯದಲ್ಲೇ ಅಧಿಕೃತವಾಗಿ ಆರಂಭವಾಗಲಿದೆ. ಈ ಬಾರಿ ಆರ್‌ಸಿಬಿ ತನ್ನ ತವರಿನ ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಆಡಲು ಕರ್ನಾಟಕ ಸರ್ಕಾರದಿಂದ ಅನುಮತಿ ಪಡೆದಿದೆ. ಇದರಿಂದ ಹೋಂ ಗ್ರೌಂಡ್ ಮ್ಯಾಚ್ ವೀಕ್ಷಣೆಗೆ ಟಿಕೆಟ್ ಖರೀದಿಗೆ ಭಾರೀ ಡಿಮ್ಯಾಂಡ್ ಶುರುವಾಗಲಿದೆ.
ಐಪಿಎಲ್ ಟೂರ್ನಿ ಹಿನ್ನೆಲೆ ಚಿನ್ನಸ್ವಾಮಿ ಮೈದಾನದಲ್ಲಿ ಸಿದ್ಧತೆಗಳು ಬಿರುಸುಗೊಂಡಿವೆ. ಇನ್ನೂ ಆರ್‌ಸಿಬಿ ಮ್ಯಾನೆಜ್‌ಮೆಂಟ್ ಇನ್ನೆರೆಡು ದಿನದಲ್ಲಿ ಅಧಿಕೃತವಾಗಿ ಟಿಕೆಟ್ (RCB Ticket) ಮಾರಾಟ ಪ್ರಕ್ರಿಯೆಯನ್ನ ಆರಂಭಿಸಲಿದೆ. ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಆರ್‌ಸಿಬಿ ಹಂಚಿಕೊಂಡಿದೆ. ಆರ್‌ಸಿಬಿ ವೆಬ್‌ಸೈಟ್ ಹಾಗೂ ಆ್ಯಪ್‌ನಲ್ಲಿ ಮಾತ್ರ ಟಿಕೆಟ್‌ಗಳು ಲಭ್ಯವಿರಲಿವೆ ಎಂದು ತಿಳಿಸಿದೆ. ಇದನ್ನೂ ಓದಿ: ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ನಾಳೆ ಬೆಳಗ್ಗೆ ಒಳಗೆ ಘೋಷಣೆ ಆಗಲಿದೆ: ರಣದೀಪ್ ಸುರ್ಜೇವಾಲಾ
ಸಾಮಾನ್ಯವಾಗಿ ಮೊದಲು ಆರ್‌ಸಿಬಿ ಆ್ಯಪ್‌ನ ಸದಸ್ಯರಿಗೆ ಟಿಕೆಟ್ ನೀಡಲಾಗುತ್ತದೆ. ನಂತರ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುತ್ತದೆ. ಟಿಕೆಟ್, ದರ, ಗೇಟ್‌ಗಳ ನಕ್ಷೆ, ಎಂಟ್ರಿ, ಎಕ್ಸಿಟ್ ಬಗ್ಗೆ ಸೋಮವಾರ ಅಧಿಕೃತವಾಗಿ ಮಾಹಿತಿ ನೀಡುವ ಸಾಧ್ಯತೆಯಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾರ್ಚ್ 28ರಂದು ಈ ಆವೃತ್ತಿಯ ಮೊದಲ ಪಂದ್ಯ ನಡೆಯಲಿದ್ದು, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಸೆಣಸಾಡಲಿದೆ. ಇದನ್ನೂ ಓದಿ: ಕುಣಿಗಲ್ ಸೊಸೈಟಿ ಚುನಾವಣೆಯಲ್ಲಿ ಅಕ್ರಮ – ಶಾಸಕ ರಂಗನಾಥ್ ಬಂಧನಕ್ಕೆ ಛಲವಾದಿ ಆಗ್ರಹ
ನಂತರ ಏಪ್ರಿಲ್ 5 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯ ನಡೆಯಲಿದೆ. ತವರಿನಲ್ಲಿ ನಡೆಯಲಿರುವ ಈ ಪಂದ್ಯಗಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಕ್ರೀಡಾಂಗಣದ ಬಳಿ ಇತ್ತೀಚೆಗೆ ನಡೆದ ಘಟನೆಗಳ ನಂತರ ಪಂದ್ಯಗಳು ನಡೆಯುವ ಬಗ್ಗೆ ವದಂತಿಗಳಿದ್ದವು. ಈಗ ಪೊಲೀಸ್ ಮತ್ತು ಆಡಳಿತ ಮಂಡಳಿಯಿಂದ ಕ್ಲಿಯರೆನ್ಸ್ ಸಿಕ್ಕಿದ್ದು, ಪಂದ್ಯಗಳು ಅದ್ಧೂರಿಯಾಗಿ ನಡೆಯಲಿವೆ. ಇದನ್ನೂ ಓದಿ: ಮಾಲ್ಡೀವ್ಸ್‌ನಲ್ಲಿ ಸ್ಪೀಡ್ ಬೋಟ್ ಅಪಘಾತ – ರೇಮಂಡ್ಸ್ ಮುಖ್ಯಸ್ಥ ಗೌತಮ್ ಸಿಂಘಾನಿಯಾಗೆ ಗಾಯ
ಐಪಿಎಲ್ ಟಿಕೆಟ್ ಇದ್ರೆ ಮೆಟ್ರೋ ಪ್ರಯಾಣ ಉಚಿತ:
ಮೂರನೇ ವ್ಯಕ್ತಿಯ ಆ್ಯಪ್‌ಗಳು, ವೆಬ್‌ಸೈಟ್‌ಗಳಿಂದ ಟಿಕೆಟ್ ಖರೀದಿಸಬೇಡಿ, ಅವು ಅಧಿಕೃತವಲ್ಲ ಅಂತ ಆರ್‌ಸಿಬಿ ಮ್ಯಾನೆಜ್‌ಮೆಂಟ್ ಎಚ್ಚರಿಸಿದೆ. ಇನ್ನೂ ಆರ್‌ಸಿಬಿ ಟಿಕೆಟ್ ಹೊಂದಿದವರಿಗೆ ಉಚಿತ ಮೆಟ್ರೋ ವ್ಯವಸ್ಥೆಯೂ ಇರಲಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳನ್ನು ನೋಡಲು ಹೋಗುವವರಿಗೆ ಮೆಟ್ರೋದಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಬಗ್ಗೆ ಸಿದ್ಧತೆಗಳು ನಡೆಯುತ್ತಿವೆ. ಇತ್ತ ಟಿಕೆಟ್ ದರವನ್ನ ಆರ್‌ಸಿಬಿ ಈವರೆಗೆ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಕಳೆದ ಸೀಸನ್‌ನಲ್ಲಿ ಟಿಕೆಟ್ ಬೆಲೆ 2,300 ರೂ.ನಿಂದ 42,000 ರೂ.ವರೆಗೆ ಇದ್ದವು. ಇದನ್ನೂ ಓದಿ: ದಾವಣಗೆರೆ ದಕ್ಷಿಣ: ಲಿಂಗಾಯತ v/s ಮುಸ್ಲಿಂ ಸಮುದಾಯ ನಾಯಕರ ನಡುವೆ ಕದನ – ಯಾರಿಗೆ ಟಿಕೆಟ್?
ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತ ಮತ್ತೆ ಮರುಕಳಿಸದಿರಲು ಕಠಿಣ ಕ್ರಮ ಅನುಸರಿಸಲಾಗುತ್ತಿದೆ. ಪಾರ್ಕಿಂಗ್ ವ್ಯವಸ್ಥೆಯ ಬಗ್ಗೆಯೂ ನಕ್ಷೆ ರೆಡಿ ಮಾಡಿಕೊಳ್ಳಲಾಗಿದೆ. ಮೈದಾನಕ್ಕೆ ಬರುವವರಿಗೆ ಲಿಂಕ್ ರಸ್ತೆ, ಕಬ್ಬನ್ ರಸ್ತೆಯಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಗರುಡಮಾಲ್, ಸೇಂಟ್ ಜೋಸೆಫ್ ಬಾಯ್ಸ್ ಹೈಸ್ಕೂಲ್, ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್, ಫ್ರೀಡಂಪಾರ್ಕ್ನಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಜೂಜಾಡುವ ವೇಳೆ ಪೊಲೀಸರ ದಾಳಿ – ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
ಇನ್ನೂ ಈ ಪಾರ್ಕಿಂಗ್‌ಗೆ ಮೊದಲೇ ಬುಕ್ಕಿಂಗ್ ಮಾಡಿಕೊಳ್ಳಬೇಕಿದೆ. ಕಳೆದ ವರ್ಷ ನಡೆದ ಕರಾಳ ನೆನಪನ್ನ ಮರೆತು, ಸುರಕ್ಷಿತವಾಗಿ ಪಂದ್ಯಗಳನ್ನು ಆಯೋಜಿಸಲು ಕೆಎಸ್‌ಸಿಎ ಕೂಡ ತುಂಬಾ ಎಚ್ಚರಿಕೆ ವಹಿಸಿದೆ. ಇದನ್ನೂ ಓದಿ: ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಕಲಘಟಗಿ, ಯಲ್ಲಾಪುರ ಮಾರ್ಗದಲ್ಲಿ ಸಂಚಾರ ನಿಷೇಧ


