ಹಲವು ಮಹಿಳೆಯರ ಜೊತೆ ಅಫೇರ್‌ ಇಟ್ಕೊಂಡಿದ್ದ – ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ

Public TV
2 Min Read

– ಆರ್‌ಸಿಬಿ ತಂಡದ ಸೂಪರ್‌ ಹೀರೋ ರಿಯಲ್‌ ಲೈಫಲ್ಲಿ ವಿಲನ್‌ ಆದ್ರಾ?
– ಊಟಿ ಟ್ರಿಪ್‌ಗೆ ಕರೆದುಕೊಂಡು ಹೋಗಿದ್ದರೆಂದು ಆರೋಪ

ಲಕ್ನೋ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಸೂಪರ್‌ ಹೀರೋ ಯಶ್‌ ದಯಾಳ್‌ ರಿಯಲ್‌ ಲೈಫ್‌ನಲ್ಲಿ ವಿಲನ್‌ ಆದ್ರಾ ಅನ್ನೋ ಪ್ರಶ್ನೆ ಹುಟ್ಟುಕೊಂಡಿದೆ. ಹೌದು. 2025ರ ಐಪಿಎಲ್‌ ಆವೃತ್ತಿಯಲ್ಲಿ ಆರ್‌ಸಿಬಿ ತಂಡವನ್ನ ಚಾಂಪಿಯನ್‌ ಪಟ್ಟಕ್ಕೇರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಸ್ಟಾರ್‌ ವೇಗಿ ಯಶ್‌ ದಯಾಳ್‌ (Yash Dayal) ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಈ ಬೆನ್ನಲ್ಲೇ ದೂರು ದಾಖಲಿಸಿದ್ದ ಗಾಜಿಯಾಬಾದ್‌ ಮಹಿಳೆಯಿಂದ ಹೊಸ ಆರೋಪ ಕೇಳಿಬಂದಿದೆ.

ನಾನು ಯಶ್ ದಯಾಳ್ ಅವರ ಮನೆಯಲ್ಲಿ 15 ದಿನಗಳ ಕಾಲ ತಂಗಿದ್ದೆ. ಯಶ್‌ ನನ್ನನ್ನ ಊಟಿ ಪ್ರವಾಸಕ್ಕೂ (Ooty Trip) ಕರೆದುಕೊಂಡು ಬಂದಿದ್ದರು. ಹಲವು ಬಾರಿ ಅವರ ಮನೆಗೆ ಹೋಗಿದ್ದೆ, ಕುಟುಂಬದೊಂದಿಗೆ ಸಮಯ ಕಳೆದಿದ್ದೆ. ಕಳೆದ 5 ವರ್ಷಗಳಿಂದ ದಯಾಳ್ ಜೊತೆ ಸಂಬಂಧ ಹೊಂದಿದ್ದು, ದಯಾಳ್ ಮದುವೆಯಾಗುವುದಾಗಿ (Marriage) ನಂಬಿಸಿದ್ದರು. ನನ್ನನ್ನು ನಿಮ್ಮ ಭಾವಿ ಸೊಸೆ ಎಂದು ಅವರ ಕುಟುಂಬಕ್ಕೆ ಪರಿಚಯಿಸಿದ್ದರು. ಇದರಿಂದ ಮದುವೆಯಾಗುತ್ತಾರೆ ಅನ್ನೋ ಭರವಸೆ ಇತ್ತು. ಆದರೆ ನನಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಸ್ಟಾರ್‌ ವೇಗಿ ಯಶ್‌ ದಯಾಳ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ – FIR ದಾಖಲು

ದಯಾಳ್‌ ನನ್ನನ್ನೂ ಹೊರತುಪಡಿಸಿ ನಾಲ್ಕುವರೆ ವರ್ಷದಲ್ಲಿ ಹಲವು ಮಹಿಳೆಯರೊಟ್ಟಿಗೆ ಸಂಪರ್ಕ ಹೊಂದಿದ್ದ. ಅದಕ್ಕೆ ಸಾಕ್ಷಿಗಳೂ ಇವೆ. ಕನಿಷ್ಠ ಮೂವರೊಟ್ಟಿಗೆ ಅಫೇರ್‌ ಇಟ್ಟುಕೊಂಡಿದ್ದಾರೆ. ಇದೆಲ್ಲವೂ ಮೊದಲೇ ತಿಳಿದಿದ್ದರೆ ಹಿಂದೆ ಸರಿಯಬಹುದಿತ್ತು. ಆದ್ರೆ ಇದ್ಯಾವುದೂ ನನಗೆ ಗೊತ್ತಿರಲಿಲ್ಲ. ಅವನೂ ಸಹ ನನ್ನ ಬಳಿ ಇದೆಲ್ಲವನ್ನೂ ಮುಚ್ಚಿಟ್ಟಿದ್ದ. ಆ ದೇವರೇ ಎಲ್ಲ ನೋಡಿಕೊಳ್ಳಲಿ ಅಂತ ನಾನು ಸುಮ್ಮನಿದ್ದೆ. ಆದ್ರೆ ನನ್ನನ್ನ ಬಳಸಿಕೊಂಡು ಭಾವನಾತ್ಮಕವಾಗಿ ಮತ್ತು ದೈಹಿಕವಾಗಿ ವಂಚಿಸಿದ್ದಾರೆ ಎಂದು ಆಕೆ ದೂರಿದ್ದಾರೆ.

ದಯಾಳ್ ತನಗೆ ಮೋಸ ಮಾಡುತ್ತಿದ್ದಾನೆಂದು ತಿಳಿದ ತಕ್ಷಣ ನಾನು ಇದನ್ನು ಪ್ರತಿಭಟಿಸಿದೆ. ಇದರಿಂದ ನಾನು ದೈಹಿಕ ಹಿಂಸೆ ಮತ್ತು ಮಾನಸಿಕ ಕಿರುಕುಳವನ್ನು ಎದುರಿಸಬೇಕಾಯಿತು. ಜೂನ್ 14 ರಂದು ಮಹಿಳಾ ಸಹಾಯವಾಣಿಗೆ ಪ್ರಕರಣದ ಬಗ್ಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಸಂತ್ರಸ್ತೆ ಪೊಲೀಸರ ವಿರುದ್ಧವೂ ಆರೋಪ ಹೊರಿಸಿದ್ದಾರೆ. ಇದನ್ನೂ ಓದಿ: ಲಲಿತ್ ಮೋದಿಗೆ ಶಾಕ್ – ಬಿಸಿಸಿಐನಿಂದ ಇಡಿ ದಂಡ ಪಾವತಿಸಲು ಕೋರಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಯಶ್‌ ದಯಾಳ್‌ ಈ ಪ್ರಕರಣವನ್ನ ಮುಚ್ಚಿಹಾಕಲು ಹಣ ಬಲ ಹಾಗೂ ತಮ್ಮ ಪ್ರಭಾವವನ್ನ ಬಳಸಿದ್ದಾರೆ. ಆದ್ರೆ ನನಗೆ ಕಾನೂನಿನ ಮೇಲೆ ಸಂಪೂರ್ಣ ನಂಬಿಕೆಯಿದೆ. ಹಲವು ಮಹಿಳೆಯರಿಗೆ ವಂಚನೆ ಮಾಡಿರೋದಕ್ಕೆ ಸಾಕ್ಷಿಗಳನ್ನು ಒದಗಿಸಿದ್ದೇನೆ. ಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: US Open 2025 Badminton | ಕಾರ್ಕಳ ಮೂಲದ 20 ವರ್ಷದ ಆಯೂಷ್‌ ಶೆಟ್ಟಿ ಚಾಂಪಿಯನ್‌

ಈಗಾಗಲೇ ಯಶ್ ದಯಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತ ಮಹಿಳೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ನ್ಯಾಯಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಪೊಲೀಸರಿಗೂ ಮನವಿ ಕೂಡ ಮಾಡಿದ್ದಾರೆ.

Share This Article