RCB vs MI ಹೈವೋಲ್ಟೇಜ್‌ ಕದನ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಂಬ್ ಸ್ಕ್ವಾಡ್ ತೀವ್ರ ತಪಾಸಣೆ

Public TV
1 Min Read

– ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಹಿನ್ನೆಲೆ ಹೈ ಅಲರ್ಟ್‌

ಬೆಂಗಳೂರು: ವೈಟ್‌ಫೀಲ್ಡ್ ಬಳಿ ಬ್ರೂಕ್ ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ (Rameshwaram Cafe Blast) ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರು (Bengaluru Police) ಫುಲ್‌ ಅಲರ್ಟ್‌ ಆಗಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ (Chinnaswamy Stadium), ಕಬ್ಬನ್ ಪಾರ್ಕ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಾಂಬ್‌ ನಿಷ್ಕ್ರಿಯ ದಳ ಹಾಗೂ ಶ್ವಾನ ದಳಗಳು ತಪಾಸಣೆ ನಡೆಸುತ್ತಿವೆ. ಇದನ್ನೂ ಓದಿ: ಬಿಎಂಟಿಸಿಯಿಂದ ಸಿಕ್ತಾ ಶಂಕಿತನ ಸುಳಿವು?- ಸಿಸಿಟಿವಿ ದೃಶ್ಯಾವಳಿ ನೀಡುವಂತೆ ಪೊಲೀಸರ ಮನವಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಆರ್‌ಸಿಬಿ – ಮುಂಬೈ ಇಂಡಿಯನ್ಸ್‌ (RCB vs MI) ನಡುವೆ ಹೈವೋಲ್ಟೇಜ್‌ ಪಂದ್ಯ ನಡೆಯಲಿದ್ದು, ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಸುಮಾರು 35 ಸಾವಿರ ಹಾಸನಗಳ ಸಾಮರ್ಥ್ಯವುಳ್ಳ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಸೇರಿವ ನಿರೀಕ್ಷೆಯಿದೆ. ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲೂ 25 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣದಲ್ಲಿ ತುಂಬಿದ್ದರು. ಈ ಹಿನ್ನೆಲೆಯಲ್ಲಿ ಬಾಂಬ್‌ ನಿಷ್ಕ್ರೀಯ ದಳ ಸ್ಟೇಡಿಯಂನಲ್ಲಿ ತಪಾಸಣೆಗೆ ಮುಂದಾಗಿದೆ.

ಇದರೊಂದಿಗೆ ಜನನಿಬಿಡ ಪ್ರದೇಶಗಳಾದ ಮಹಾತ್ಮ ಗಾಂಧಿ ರಸ್ತೆ, ಚರ್ಚ್ ಸ್ಟ್ರೀಟ್ ಗಳಲ್ಲಿಯೂ ತಪಾಸಣೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಮಂಗಳೂರು ಬ್ಲಾಸ್ಟ್‌ಗೂ ರಾಮೇಶ್ವರಂ ಕೆಫೆ ಸ್ಪೋಟಕ್ಕೂ ಲಿಂಕ್ ಕಾಣ್ತಿದೆ: ಡಿಕೆಶಿ

Share This Article