ಹೇಮಾವತಿ ನೀರಿಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧ: ಕುಣಿಗಲ್ ಶಾಸಕ ರಂಗನಾಥ್

Public TV
1 Min Read

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ (Hemavati Express Canal) ವಿವಾದ ಮತ್ತಷ್ಟು ತೀವ್ರಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಹೇಮಾವತಿ ನೀರಿಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ (Dr Ranganath) ಹೇಳಿಕೆ ನೀಡಿದ್ದಾರೆ.

ಕುಣಿಗಲ್ ತಾಲೂಕಿನ ಎಲೆಯೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ತಾಲೂಕಿನ ರೈತರಿಗಾಗಿ ತಗ್ಗಿ ಬಗ್ಗಿ ನಡೆಯಲು ಸಿದ್ಧನಿದ್ದೇನೆ. ನೀವು ಪೈಪ್‌ಲೈನ್ ಕಾಮಗಾರಿಗೆ ಅಡ್ಡಿಪಡಿಸಲು ನಿಂತರೆ ಕುಣಿಗಲ್ ತಾಲೂಕಿನ ನಾವು ಗಂಡು ಮಕ್ಕಳು ಕಚ್ಚೆ ಕಟ್ಟಿ ಹೋರಾಟ ಮಾಡೋಕೆ ತಯಾರಿದ್ದೇವೆ. ಮುಂದಿನ ದಿನಗಳಲ್ಲಿ ಬೀದಿಗೆ ಇಳಿಯುತ್ತೇವೆ. ನಮ್ಮ ತಾಲೂಕಿನ ನೀರಿಗಾಗಿ ಹೋರಾಟ ಮಾಡುತ್ತೇವೆ ಎಂದರು. ಇದನ್ನೂ ಓದಿ:‌ ಕಾಲ್ತುಳಿತ ಕೇಸ್‌; IPS ಅಧಿಕಾರಿ ವಿಕಾಸ್‌ ಕುಮಾರ್‌ಗೆ ರಿಲೀಫ್‌ – ಅಮಾನತು ರದ್ದಿಗೆ CAT ಆದೇಶ

ನಾನು ಸಹ ಕುಣಿಗಲ್ ತಾಲೂಕಿನ ಮಗನಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಹಿಂದೆಮುಂದೆ ನೋಡಲ್ಲ. ನನ್ನ ತಾಲೂಕಿನ ರೈತರಿಗೋಸ್ಕರ ನನ್ನ ದೇಹ ತ್ಯಾಗಕ್ಕೂ ಸಿದ್ಧನಿದ್ದೇನೆ. ನಮ್ಮೂರು ಎಲೆಯೂರಿನಲ್ಲಿ ಈ ಮಾತು ಹೇಳುತ್ತಿದ್ದೇನೆ. ನಾನು ಬಹಳ ತಾಳ್ಮೆಯಿಂದ ನೋಡುತ್ತಿದ್ದೇನೆ ಎಂದು ವೇದಿಕೆ ಮೇಲೆ ಭಾವುಕ ಮಾತುಗಳನ್ನಾಡಿದರು. ಇದನ್ನೂ ಓದಿ: ಅವಧಿ ಮುಗಿದ ವಾಹನಗಳಿಗೆ ಇಂದಿನಿಂದ ಪೆಟ್ರೋಲ್, ಡಿಸೇಲ್ ಇಲ್ಲ

Share This Article