ಜನವರಿಯಲ್ಲಿ ಜಾತಿಗಣತಿ ವರದಿ ಸ್ವೀಕಾರ: ಸಿದ್ದರಾಮಯ್ಯ

Public TV
1 Min Read

ಬೆಂಗಳೂರು: ಜಾತಿಗಣತಿ ವರದಿಯನ್ನು (Census Report) ನಮ್ಮ ಸರ್ಕಾರ ಸ್ವೀಕಾರ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಪುನರುಚ್ಛಾರ ಮಾಡಿದ್ದಾರೆ.

ಕಾಳಿದಾಸ ಹೆಲ್ತ್ ಅಂಡ್ ಎಜುಕೇಶನ್ ಟ್ರಸ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ಇದಕ್ಕಾಗಿ 165 ಕೋಟಿ ರೂ. ಖರ್ಚು ಮಾಡಿದ್ದೆವು ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಆಡಳಿತದಲ್ಲಿ ಕರ್ನಾಟಕಕ್ಕೆ ಗ್ರಹಣ- ಬಿಜೆಪಿ ವ್ಯಂಗ್ಯ

ಜಾತಿ ಗಣತಿ ವರದಿ ನಾನು ಇದ್ದಾಗ ಬಂದಿರಲಿಲ್ಲ. ನಾನು ಹೋದ ಮೇಲೆ ಯಡಿಯೂರಪ್ಪ, ಕುಮಾರಸ್ವಾಮಿ, ಬೊಮ್ಮಾಯಿ ಬಂದರೂ ಅವರು ವರದಿ ಬಿಡುಗಡೆ ಮಾಡಿಲ್ಲ. ಕುಮಾರಸ್ವಾಮಿ (HD Kumaraswamy) ಸಮಯದಲ್ಲಿ ವರದಿ ರೆಡಿ ಆಗಿದೆ. ಅಂದಿನ ಸಚಿವ ಪುಟ್ಟರಂಗಶೆಟ್ಟಿ ವರದಿ ತೆಗೆದುಕೊಳ್ಳೋಕೆ ರೆಡಿ ಇದ್ದರು. ಆದರೆ ಕುಮಾರಸ್ವಾಮಿ ವರದಿ ತೆಗೆದುಕೊಳ್ಳಬೇಡ ಎಂದು ಹೆದರಿಸಿದರು. ಅದಕ್ಕೆ ಪುಟ್ಟರಂಗಶೆಟ್ಟಿ ವರದಿ ಪಡೆಯಲಿಲ್ಲ ಎಂದು ಕುಮಾರಸ್ವಾಮಿ ಮೇಲೆ ಆರೋಪ ಮಾಡಿದರು. ಇದನ್ನೂ ಓದಿ: ಎಫ್‍ಡಿಎ ಪರೀಕ್ಷೆ ಅಕ್ರಮ – ಸರ್ಕಾರಕ್ಕೆ ಮಾಹಿತಿ ಇದ್ದರೂ ನಿರ್ಲಕ್ಷ್ಯ

ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಜನವರಿಯಲ್ಲಿ ವರದಿ ಕೊಡುತ್ತೇನೆ ಎಂದು ಹೇಳಿದ್ದಾರೆ. ಅ ವರದಿಯನ್ನು ಸ್ವೀಕಾರ ಮಾಡುತ್ತೇನೆ. ಜಾತಿ ಗಣತಿ ಅತ್ಯಂತ ಮುಖ್ಯವಾಗಿದ್ದು, ಜಾತಿ ಗಣತಿ ವರದಿ ಸ್ವೀಕಾರ ಮಾಡುವುದಾಗಿ ಘೋಷಣೆ ಮಾಡಿದರು. ಇದನ್ನೂ ಓದಿ: ಹೆಚ್‌ಡಿಕೆ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಹೆಚ್‌ಸಿ ಬಾಲಕೃಷ್ಣ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್