ಕರಾವಳಿ ಭಾಗದಲ್ಲಿಂದು ರೆಡ್ ಅಲರ್ಟ್ – ಬೆಂಗ್ಳೂರಲ್ಲಿ ದಿನವಿಡೀ ತುಂತುರು ಮಳೆ

Public TV
1 Min Read

-ರಾಜ್ಯಾದ್ಯಂತ ಮುಂದಿನ 3 ದಿನ ಭಾರೀ ಮಳೆಯ ಸೂಚನೆ

ಬೆಂಗಳೂರು: ನೈರುತ್ಯ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ ರಾಜ್ಯಾದ್ಯಂತ (Karnataka) ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ (Coastal) ಭಾಗಕ್ಕೆ ಇಂದು (ಮಂಗಳವಾರ) ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ.

ಉತ್ತರ ಒಳನಾಡಿನ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆ 3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೋರಾದ ಮಳೆ ಸಾಧ್ಯತೆಯಿದ್ದು, ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬುಧವಾರ ಹಾಗೂ ಗುರುವಾರಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಮಾತ್ರವಲ್ಲದೇ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬುಧವಾರದಿಂದ 4 ದಿನಗಳ ಕಾಲ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮುಂದಿನ 5 ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ 5 ದಿನಗಳ ಕಾಲ ಬಿರುಗಾಳಿಯ ವೇಗ ಗಂಟೆಗೆ 55 ಕಿ.ಮೀ ಇರಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ – ಉಕ್ಕಿ ಹರಿದ ಕಾವೇರಿ ನದಿ; ಬಡಾವಣೆ ಜಲಾವೃತ

ಊಟಿಯಂತಾದ ಬೆಂಗಳೂರು:
ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ತುಂತುರು ಮಳೆ ಪ್ರಾರಂಭವಾಗಿದೆ. ದಿನವಿಡೀ ನಗರದಲ್ಲಿ ತುಂತುರು ಮಳೆಯ ಸಿಂಚನವಿರಲಿದೆ. ನಗರದಲ್ಲಿ ಬೆಳಗ್ಗಿನಿಂದ ಸಂಜೆಯವರೆಗೂ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ. ಸೋಮವಾರ ಇಡೀ ದಿನ ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಮಳೆ ಸುರಿದಿತ್ತು. ಇದನ್ನೂ ಓದಿ: ಕಣ್ಣು ಕೆಂಪಾಗಿಸುತ್ತಿದೆ `ಮದ್ರಾಸ್ ಐ’ – ಮಕ್ಕಳೇ ಇದರ ಟಾರ್ಗೆಟ್!

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್