ರೀಲ್ಸ್ ಕೇಸ್: ನಿನ್ನೆ ಜೈಲು ಪಾಲು – ಇಂದು ರಜತ್‌ಗೆ ಜಾಮೀನು

Public TV
1 Min Read

ಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ‘ಬಿಗ್ ಬಾಸ್’ ರಜತ್‌ಗೆ (Rajath) 24ನೇ ಎಸಿಎಂಎಂ ಕೋರ್ಟ್ ಜಾಮೀನು (Bail) ಮಂಜೂರು ಮಾಡಿದೆ.

ನಿನ್ನೆ ನ್ಯಾಯಾಂಗ ಬಂಧನಕ್ಕೆ ಕಳಹಿಸಿದ್ದ 24ನೇ ಎಸಿಎಂಎಂ ನ್ಯಾಯಾಲಯ ಇಂದು ರಜಜತ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ರೀಲ್ಸ್ ಕೇಸ್ – ರಜತ್ ಜೈಲಿಗೆ, ವಿನಯ್‌ಗೆ 500 ರೂ. ದಂಡ


ರೀಲ್ಸ್ ಕೇಸ್‌ಗೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ರಜತ್‌ಗೆ 2 ಬಾರಿ ಪೊಲೀಸರು ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗದ ರಜತ್‌ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ನಿನ್ನೆ (ಏ.16) ಕೋರ್ಟ್ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಆದೇಶದ ಅನ್ವಯ ರಜತ್ ಏ.29ರವರೆಗೆ ಪರಪ್ಪನ ಅಗ್ರಹಾರದಲ್ಲಿ ಇರಬೇಕಿತ್ತು. ಇದನ್ನೂ ಓದಿ: ರೀಲ್ಸ್ ಕೇಸ್: ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ರಜತ್

ರೀಲ್ಸ್‌ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆ 2 ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿತ್ತು.

Share This Article