ಬಳ್ಳಾರಿ: ಮನೆಯೊಂದರಲ್ಲಿದ್ದ ಫ್ರಿಡ್ಜ್ (Fridge) ಸ್ಫೋಟಗೊಂಡ (Blast) ಘಟನೆ ಕಂಪ್ಲಿ ಪಟ್ಟಣದ ವಾರ್ಡ್ ನಂ 13 ರಲ್ಲಿ ನಡೆದಿದೆ.
ಶರೀಫ್ ಸಾಬ್ ಅವರ ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಮನೆಯಲ್ಲಿ (House) ಯಾರು ಇಲ್ಲದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಇದನ್ನೂ ಓದಿ: ರಾಜ್ಯದಲ್ಲಿ ಜಾತಿಗಣತಿಗೆ ದಿನಾಂಕ ಫಿಕ್ಸ್ – ಸೆ.22ರಿಂದ ಅ.7ರ ವರೆಗೆ ಸಮೀಕ್ಷೆ ನಡೆಸಲು ನಿರ್ಧಾರ
ರೆಫ್ರಿಜರೇಟರ್ ಸ್ಪೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಪೋಟದಿಂದ ಮನೆ ಗೋಡೆ ಬಿರಕು ಬಿಟ್ಟಿದ್ದು, ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಜೆಸ್ಕಾಂ ಎಇ ವಿನೋದ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ಯಾಸ್ ಲೀಕ್ ಆಗಿ ಫ್ರಿಡ್ಜ್ ಸ್ಫೋಟಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.