ಬೆಂಗಳೂರು: ರಾಜ್ಯದಲ್ಲಿ ಉಂಟಾಗುತ್ತಿರುವ ಯೂರಿಯಾ (Urea) ಕೊರತೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಕೊಡಬೇಕಾದ ಯೂರಿಯಾವನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಕೇಂದ್ರ ಸಚಿವ ಜೆ.ಪಿ.ನಡ್ಡಾ (JP Nadda) ಅವರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ರದ ಮೂಲಕ ಆಗ್ರಹಿಸಿದ್ದಾರೆ.ಇದನ್ನೂ ಓದಿ: Ullu, ALTT ಬಾಲಾಜಿ ಸೇರಿದಂತೆ 25 OTT ಪ್ಲಾಟ್‌ಫಾರಂಗಳು ಬ್ಯಾನ್
ಪತ್ರದಲ್ಲಿ, ರಾಜ್ಯಕ್ಕೆ ಒಟ್ಟು 11.17 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊಡಬೇಕಿತ್ತು. ಇಲ್ಲಿಯವರೆಗೆ 5.16 ಲಕ್ಷ ಮೆಟ್ರಿಕ್ ಟನ್ ಮಾತ್ರ ಕೊಡಲಾಗಿದೆ. ರಾಜ್ಯಕ್ಕೆ ಇನ್ನೂ 6.80 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬರಬೇಕಿದೆ. ಆದರೆ ಕೆಲ ಫರ್ಟಿಲೈಸರ್ ಕಂಪನಿಗಳು ಕೊರತೆಯ ಕಾರಣ ಹೇಳಿ ಯೂರಿಯಾ ಒದಗಿಸುತ್ತಿಲ್ಲ. ಹೀಗಾಗಿ ಕೂಡಲೇ ಯೂರಿಯಾ ಕೊಡುವಂತೆ ಒತ್ತಾಯಿಸಿದ್ದಾರೆ.
ಕಳೆದ ವರ್ಷಕ್ಕಿಂತ ಈ ಬಾರಿ ಮುಂಗಾರು ಮಳೆ ಹೆಚ್ಚಾಗಿದೆ. ಕಾವೇರಿ, ತುಂಗಭದ್ರಾ, ಕೃಷ್ಣಾದಿಂದ ನೀರು ಬಿಡುಗಡೆಯಾಗಿದೆ. ಇದರಿಂದ ರೈತರು ಕೃಷಿ ಚಟುವಟಿಕೆಗಳನ್ನ ಪ್ರಾರಂಭ ಮಾಡಿದ್ದಾರೆ. ಕಳೆದ ವರ್ಷಕ್ಕಿಂತ ಎರಡು ಲಕ್ಷ ಹೆಕ್ಟೇರ್‌ಗಳಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿದೆ. ಹೀಗಾಗಿ ಕೂಡಲೇ ಯೂರಿಯಾ ಒದಗಿಸುವಂತೆ ಮನವಿ ಮಾಡಿದ್ದಾರೆ.ಇದನ್ನೂ ಓದಿ: ಟಿ.ನರಸೀಪುರ ಪುರಸಭೆಯಲ್ಲಿ 40 ಕೋಟಿ ತೆರಿಗೆ ವಂಚನೆ ಆರೋಪ – ಆಡಿಯೋ ಸ್ಫೋಟ