ಮಹಿಳೆ ಮೇಲೆ ಅತ್ಯಾಚಾರ ಆರೋಪ ಕೇಸ್ – ಶಾಸಕ ಮುನಿರತ್ನಗೆ ಬಿಗ್ ರಿಲೀಫ್

By
1 Min Read

ಬೆಂಗಳೂರು: ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ (Rape Case) ಶಾಸಕ ಮುನಿರತ್ನಗೆ (Munirathna) ಬಿಗ್ ರಿಲೀಫ್ ಸಿಕ್ಕಿದೆ.

ಸಾಕ್ಷ್ಯಧಾರ ಕೊರತೆ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ(SIT) ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ (B Report) ಸಲ್ಲಿಕೆ ಮಾಡಿದ್ದಾರೆ.

ಮೊಬೈಲ್‌ನಲ್ಲಿ ವಿಡಿಯೋ ಮಾಡಿ, ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ರು. ಅಲ್ಲದೇ ವಿಡಿಯೋದಲ್ಲಿ ನಿದ್ರೆ ಮಾತ್ರೆ ಸೇವಿಸಿ, ಆತ್ಮಹತ್ಯೆಗೆ ಯತ್ನಿಸುತ್ತಿರುವಂತೆ ವಿಡಿಯೋ ಮಾಡಿದ್ದರು. ತನಿಖೆ ನಡೆಸಿದ್ದ ಎಸ್‌ಐಟಿ ಪೊಲೀಸರು ಇದೀಗ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ.

ಮಹಿಳೆ ನಿದ್ರೆ ಮಾತ್ರೆ ಸೇವಿಸುವಂತೆ ವಿಡಿಯೋ ಮಾಡಲು 8 ಬಾರಿ ರಿಹರ್ಸಲ್ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆದರೆ ವೈದ್ಯಕೀಯ ತಪಾಸಣೆ ವೇಳೆ ನಿದ್ರೆ ಮಾತ್ರೆ ಸೇವಿಸಿರೋದೋಕೆ ದೇಹದಲ್ಲಿ ಯಾವುದೇ ಅಂಶ ಇಲ್ಲ ಎಂದು ವರದಿ ಬಂದಿದೆ. ಮಹಿಳೆ ಮಾಡಿರೋ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೇಳೆ ಇಂದು ಶಾಸಕ ಮುನಿರತ್ನ ವಿರುದ್ಧದ ಸಾಮೂಹಿಕ ಅತ್ಯಾಚಾರ ಕೇಸ್ ಕೋರಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೂಡ ನಡೆಯಿತು. ಇದನ್ನೂ ಓದಿ: ಶಿವಮೊಗ್ಗ | ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಅರ್ಜಿ ವಿಚಾರಣೆ ವೇಳೆ ವಾದ ಮಂಡಿಸಿದ ಶಾಸಕ ಮುನಿರತ್ನ ಪರ ವಕೀಲ, ಎಸ್‌ಐಟಿ ಪೊಲೀಸರು ಆರೋಪ ಸಾಬೀತಾಗಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ಹೇಳಿದರು. ಆದರೆ ಬಿ ರಿಪೋರ್ಟ್ ಅನ್ನು ಕೋರ್ಟ್ ಇನ್ನೂ ಅಂಗೀಕರಿಸಿಲ್ಲವೆಂದು ಎಸ್‌ಪಿಪಿ ಮಾಹಿತಿ ನೀಡಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಮುನಿರತ್ನ ಬಂಧಿಸದಂತೆ ನೀಡಿದ್ದ ಮಧ್ಯಂತರ ತಡೆ ವಿಸ್ತರಿಸಿದೆ.

Share This Article