ಮಸೀದಿಗಳ ಧ್ವನಿವರ್ಧಕಗಳನ್ನು ತೆಗೆಸಿ: ರಾಜ್ ಠಾಕ್ರೆ

Public TV
1 Min Read

ಮುಂಬೈ: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸದಿದ್ದರೇ ಹನುಮಾನ್ ಚಾಲೀಸ್ ನುಡಿಸುತ್ತೇವೆ ಎಂದು ಮಹಾರಾಷ್ಟ್ರ ನವನಿರ್ಮಾಣಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರಾರ್ಥನೆ ಮಾಡುವುದಕ್ಕೆ ವಿರೋಧಿಸುವುದಿಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥನೆ ಮಾಡಬಹುದು. ಆದರೆ ಮಸೀದಿಗಳಲ್ಲಿನ ಧ್ವನಿವರ್ಧಕಗಳಿಂದ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮಸೀದಿಯ ಧ್ವನಿವರ್ಧಕಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಬಗ್ಗೆ ಕ್ರಮಕೈಗೊಳ್ಳದಿದ್ದರೇ, ಧ್ವನಿವರ್ಧಕಗಳನ್ನು ನಾವೇ ತೆಗೆದು ಹಾಕಿ, ಮಸೀದಿಯ ಮುಂದೆ ಹನುಮಾನ್ ಚಾಲೀಸ್‍ನ್ನು ನುಡಿಸಲು ಪ್ರಾರಂಭಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಅಧಿಕಾರದಲ್ಲಿರುವವರು ಸಮಾಜದಲ್ಲಿ ಕಹಿಯನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ: ಶರದ್ ಪವಾರ್

ಸಂಸದರಿಗೆ ಮತ್ತು ಶಾಸಕರಿಗೆ ನೀಡುತ್ತಿರುವ ಪಿಂಚಣಿಯನ್ನು ಹಿಂಪಡೆಯಲು ಸರ್ಕಾರವನ್ನು ಒತ್ತಾಯಿಸಿದರು. ಅವರಿಗೆ ಮನೆಗಳನ್ನು ನೀಡಬೇಕಾದರೆ ಅವರ ಫಾರ್ಮ್‍ಹೌಸ್ ಅನ್ನು ತೆಗೆದುಕೊಳ್ಳಬೇಕು. ಅದನ್ನು ಕೊಳೆಗೇರಿಗಳಲ್ಲಿ ವಾಸಿಸುವ ಬಡವರಿಗೆ ಕೊಡಿ ಎಂದು ಒತ್ತಾಯಿಸಿದರು.

ಮುಂಬೈನ ಕೆಲ ಮುಸ್ಲಿಂ ಕೊಳಗೇರಿಗಳಲ್ಲಿರುವ ಮದರಸಾಗಳಲ್ಲಿ ಪಾಕಿಸ್ತಾನಿಗಳಿದ್ದಾರೆ. ಅಂತಹವರಿಗೆ ಆಧಾರ್ ಕಾರ್ಡ್ ಕೂಡ ಇಲ್ಲ. ರಾಜ್ಯದ ಕೆಲ ರಾಜಕೀಯ ನಾಯಕರು ಅವರನ್ನು ತಮ್ಮ ಮತ ಬ್ಯಾಂಕ್‍ಗಳನ್ನಾಗಿ ಮಾಡಿಕೊಂಡಿದ್ದಾರೆ. ಈ ಮದರಸಾಗಳ ಮೇಲೆ ದಾಳಿ ನಡೆಸುವಂತೆ ಅವರು ಪ್ರಧಾನಿ ಮೋದಿಗೆ ಒತ್ತಾಯಿಸಿದರು. ಇದನ್ನೂ ಓದಿ: ಜಟ್ಕಾ ಕಟ್ ಮಟನ್ ಅಂಗಡಿಗಳ ಮುಂದೆ ಕೇಸರಿ ಧ್ವಜ

Share This Article
Leave a Comment

Leave a Reply

Your email address will not be published. Required fields are marked *