– `ಡಿ’ ಗ್ಯಾಂಗ್‌ನ ಏಳು ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಆದೇಶ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳಾದ ನಟ ದರ್ಶನ್ (Actor Darshan) ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಕರ್ನಾಟಕ ಪೊಲೀಸರು (Karnataka Police) ಸಲ್ಲಿಸಿದ್ದ ಅರ್ಜಿ ಭವಿಷ್ಯ ಇಂದು (ಆ.14) ಹೊರಬೀಳಲಿದೆ.
ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸುತ್ತಾ? ಅಥವಾ ಮುಂದುವರೆಯುತ್ತಾ ಎಂಬ ಕುತೂಹಲಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಜೊತೆಗೆ ನಟ ದರ್ಶನ್ ಕೂಡ ಜಾಮೀನು ಮುಂದುವರೆಯುವ ನಿರೀಕ್ಷೆಯಲ್ಲಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ2 ದರ್ಶನ್ ಹಾಗೂ `ಡಿ’ ಗ್ಯಾಂಗ್‌ಗೆ ಹೈಕೋರ್ಟ್ ಜಾಮೀನು ನೀಡಿತ್ತು. ರಾಜ್ಯ ಪೊಲೀಸ್ ಇಲಾಖೆ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಆದೇಶವನ್ನು ಕಾಯ್ದಿರಿಸಿತ್ತು. ಗುರುವಾರ ದರ್ಶನ್, ಪವಿತ್ರಾ ಸೇರಿದಂತೆ ಏಳು ಜನರ ಬೇಲ್ ಭವಿಷ್ಯ ಹೊರಬೇಳಲಿದೆ.
ಇನ್ನೂ ಈ ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಾದ-ಪ್ರತಿವಾದದ ಸಂದರ್ಭದಲ್ಲಿ ದರ್ಶನ್ ಹಾಗೂ ಪವಿತ್ರಾ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಜಾಮೀನು ಮುಂದುವರೆಸುವಂತೆ ಮನವಿ ಮಾಡಿಕೊಂಡಿದ್ದರು.
ದರ್ಶನ್ ಹೇಳಿದ್ದೇನು?
- ಮೈಸೂರಿನಲ್ಲಿ ಬಂಧಿಸಿ, ಬೆಂಗಳೂರಲ್ಲಿ ಎಫ್‌ಐಆರ್ ಹಾಕಿದ್ದಾರೆ
- ಬಂಧನಕ್ಕೆ ಸಂಜೆ 6:30ವರೆಗೆ ಲಿಖಿತ ಕಾರಣ ತಿಳಿಸಿಲ್ಲ, ಇದು ಕಾನೂನು ಉಲ್ಲಂಘನೆ
- ಜಾಮೀನು ರದ್ದುಪಡಿಸೋದು ಕಠಿಣ ಕ್ರಮವಾಗಲಿದೆ
- ಯಾವುದೇ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ
- ಅಪಹರಣದಲ್ಲಿ ಇವರ ಪಾತ್ರ, ಸೂಚನೆಗೆ ಸಾಕ್ಷಿ, ಆಧಾರಗಳಿಲ್ಲ
- ದರ್ಶನ್ & ಎ-3 ಪವನ್ ಮಧ್ಯೆ ಮಾತುಕತೆ ನಡೆದಿಲ್ಲ
- ವಾಟ್ಸಾಪ್ ಸಂದೇಶ ವಿನಿಮಯವಾಗಿಲ್ಲ
- ಸಾಕ್ಷಿಗಳ ಹೇಳಿಕೆಗಳಲ್ಲೇ ಅನುಮಾನವಿದೆ
ಪವಿತ್ರಾಗೌಡ ಹೇಳಿದ್ದೇನು?
- ನಾನು ಒಬ್ಬಂಟಿ ಪೋಷಕಳಾಗಿದ್ದೇನೆ ನನಗೆ ಒಬ್ಬಳೇ ಒಬ್ಬಳು ಮಗಳಿದ್ದಾಳೆ
- ವಯಸ್ಸಾದ ಪೋಷಕರನ್ನೂ ನೋಡಿಕೊಳ್ಳಬೇಕಿದೆ
- ನನಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ
- ಮಹಿಳೆ ಆಗಿರೋದ್ರಿಂದ ಜಾಮೀನು ರದ್ದು ಕಠಿಣ ಕ್ರಮವಾಗಲಿದೆ
ಇದೆಲ್ಲದರ ಮಧ್ಯೆ ಸರ್ಕಾರಿ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಕೆಲವು ಮಾಹಿತಿಗಳನ್ನು ನೀಡಿದ್ದರು.
- ಮೃತ ರೇಣುಕಾಸ್ವಾಮಿ ದರ್ಶನ್ ಅಭಿಮಾನಿಯಾಗಿದ್ದ.
- ದರ್ಶನ್-ಪವಿತ್ರಗೌಡ ಲಿವ್-ಇನ್ ಸಂಬಂಧದಲ್ಲಿದ್ದರು.
- ಪವಿತ್ರಾಗೌಡಗೆ ರೇಣುಕಾಸ್ವಾಮಿ ಅವಹೇಳನಕಾರಿ ಸಂದೇಶ ಕಳುಹಿಸಿದ್ದ
- ಇದರಿಂದಾಗಿ ಪಟ್ಟಣಗೆರೆ ಶೆಡ್‌ನಲ್ಲಿ ಕೊಲೆ ಮಾಡಲಾಯ್ತು
- ಆರೋಪಿಗಳು ಕಿಡ್ನ್ಯಾಪ್, ಕೊಲೆಯಾದ ಸ್ಥಳದಲ್ಲಿದ್ದರು ಅನ್ನೋದು ತನಿಖೆಯಿಂದ ಬಯಲು
- ಪಟ್ಟಣಗೆರೆ ಶೆಡ್‌ಗೆ ಪ್ರವೇಶ ಮಾಡೋದನ್ನು ಐವರು ಸಾಕ್ಷಿಗಳು ನೋಡಿದ್ದಾರೆ
- ಘಟನಾ ಸ್ಥಳದಿಂದ ಸಂಗ್ರಹಿಸಲಾದ ಮಣ್ಣಿನ ಮಾದರಿ ದೃಢಪಟ್ಟಿದೆ
- ಕೊಲೆ ವೇಳೆ ಎ-1 ಪವಿತ್ರಾ, ಎ-2 ದರ್ಶನ್ ಸಕ್ರಿಯ
- ರೇಣುಕಾಸ್ವಾಮಿ ರಕ್ತದ ಕಲೆಗಳು ಆರೋಪಿ ಬಟ್ಟೆ ಮೇಲೆ ಕಂಡುಬಂದಿದೆ
- ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಅಂತ ಹೈಕೋರ್ಟ್ ಹೇಳಿರುವುದು
- ತಪ್ಪು ಸಾಕ್ಷಿ ಪುನೀತ್ ಹೇಳಿಕೆ ತಡವಾಗಿ ದಾಖಲಿಸಿರೋದಕ್ಕೆ ಸೂಕ್ತ ಕಾರಣ ನೀಡಲಾಗಿದೆ
- ವಿಧಿವಿಜ್ಞಾನ, ಎಲೆಕ್ಟ್ರಾನಿಕ್ ಮತ್ತು ಸಿಡಿಆರ್ ಪುರಾವೆಗಳನ್ನು ಹೈಕೋರ್ಟ್ ಪರಿಗಣಿಸಿಲ್ಲ
- ಎ-2 ದರ್ಶನ್‌ಗೆ ಅಪರಾಧದ ಹಿನ್ನೆಲೆ ಇದೆ
- ಬೆನ್ನು ನೋವು ಅಂತ ವಿನಾಯ್ತಿ ಪಡೆದು ಮರುದಿನವೇ ಶೂಟಿಂಗ್‌ಗೆ ಹೋಗಿದ್ದಾರೆ
ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡಿರುವ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠ ಮಹತ್ವದ ತೀರ್ಪನ್ನು ನೀಡುವ ಸಾಧ್ಯತೆ ಇದೆ. ಇದರ ಜೊತೆಗೆ ವಿಶೇಷ ಅಂದ್ರೆ `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಅನ್ನೋ ಸಾಲುಗಳಲ್ಲಿ ಡೆವಿಲ್ ಸಿನಿಮಾ ಹಾಡು ಶುಕ್ರವಾರ (ಆ.15) ರಿಲೀಸ್ ಆಗಲಿದೆ.