– ಬೇರೆ ಜೈಲಿಗೆ ಶಿಫ್ಟ್ ಆಗೋದಕ್ಕೂ ದರ್ಶನ್ ಅಡ್ಡಿ ಅಂತ ಬೇಸರ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ (Renukaswamy Murder Case) ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅಂಡ್ ಗ್ಯಾಂಗ್ (Darshan And Gang) ನಡುವೆ ಒಡಕು ಮೂಡಿದೆ. ಸ್ವತಃ ಗ್ಯಾಂಗ್‌ನ ಸದಸ್ಯರೇ ದರ್ಶನ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ ಅನ್ನೋದು ಮೂಲಗಳಿಂದ ತಿಳಿದುಬಂದಿದೆ.
ಹೌದು. ದರ್ಶನ್, ಪ್ರದೋಷ್, ಲಕ್ಷ್ಮಣ್, ಅನ್ಬುಕುಮಾರ್, ಜಗದೀಶ್, ನಾಗರಾಜ್, ಪವಿತ್ರಾಗೌಡ (Pavithra Gowda) ಅವರ ಜಾಮೀನನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದ ಬಳಿಕ ಎಲ್ಲರನ್ನ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ. ದರ್ಶನ್ ಅಂಡ್ ಗ್ಯಾಂಗ್ ನನ್ನ ಪರಪ್ಪನ ಅಗ್ರಹಾರದ ಜೈಲಿನ ಒಂದೇ ಬ್ಯಾರಕ್‌ನಲ್ಲಿ ಇರಿಸಲಾಗಿದೆ. ಇದನ್ನೂ ಓದಿ: Andhra Pradesh | ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು
ಮೊದಲ ಬಾರಿ ಜೈಲಿಗೆ ಹೋಗಿದ್ದಾಗ ದರ್ಶನ್‌ಗೆ ಬಳ್ಳಾರಿ ಜೈಲು ಸೇರಿದಂತೆ ಉಳಿದ ಆರೋಪಿಗಳಿಗೆ ಬೇರೆ ಬೇರೆ ಜೈಲಿನಲ್ಲಿ ಇರಿಸಲಾಗಿತ್ತು. ಆದೇ ರೀತಿ ಆಡಳಿತ ಹಾಗೂ ಭದ್ರತೆ ದೃಷ್ಠಿಯಿಂದ ಕಳೆದ ಬಾರಿ ಇದ್ದ ಜೈಲುಗಳಿಗೆ ದರ್ಶನ್ ಸೇರಿದಂತೆ ಗ್ಯಾಂಗ್ ಸದಸ್ಯರುಗಳಿಗೆ ಆಯಾ ಜೈಲಿಗೆ ಶಿಫ್ಟ್ ಮಾಡಬೇಕೆಂದು ಸರ್ಕಾರಿ ಪರ ವಕೀಲರು ಅರ್ಜಿ ಹಾಕಿಕೊಂಡಿದ್ದರು. ಟ್ರಯಲ್ ದಿನಾಂಕ ನಿಗದಿಯಾಗುವುದರಿಂದ ಪ್ರತಿಭಾರಿ ದರ್ಶನ್ ಅಂಡ್ ಗ್ಯಾಂಗ್ ಕರೆದುಕೊಂಡು ಬರಲು ಕಷ್ಟವಾಗುತ್ತೆ ಹಾಗಾಗಿ ಬೇರೆ ಜೈಲಿಗೆ ಶಿಫ್ಟ್ ಮಾಡಬಾರದು ಎಂದು ವಾದ ಮಾಡಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾದೀಶರು ದರ್ಶನ್ ಅಂಡ್ ಗ್ಯಾಂಗ್ ಜೈಲಿಗೆ ಹೋದ ದಿನದಿಂದ ದುರ್ವರ್ತನೆ ತೋರದ ಕಾರಣ ಬೇರೆ ಜೈಲಿಗೆ ಶಿಫ್ಟ್ ಮಾಡಲು ಆಗಲ್ಲ ಎಂದು ಕೋರ್ಟ್ ದರ್ಶನ್ ಅಂಡ್ ಗ್ಯಾಂಗ್ ಅನ್ನ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಲು ಕೋರ್ಟ್ ನಿರಾಕರಿಸಿತ್ತು. ಇದನ್ನೂ ಓದಿ: ರಾಯಚೂರಿನಲ್ಲಿ ಸರ್ಕಾರಿ ಬಸ್ ಪಲ್ಟಿ – ಪ್ರಯಾಣಿಕನ ಕಾಲು ಮುರಿತ, 15 ಮಂದಿಗೆ ಗಾಯ
ಇದು ದರ್ಶನ್ ಅಂಡ್ ಗ್ಯಾಂಗ್ ನಡುವೆ ಒಡಕು ಮೂಡಲು ಕಾರಣವಾಗಿದೆ ಎಂದು ಹೇಳಲಾಗ್ತಿದೆ. ಬೇರೆ ಜೈಲಿಗೆ ಶಿಫ್ಟ್ ಆಗುವ ವಿಚಾರದಲ್ಲಿ ದರ್ಶನ್ ಅಡ್ಡಿ ಆಗ್ತಿದ್ದಾರೆಂದು ಗ್ಯಾಂಗ್‌ನ ಸದಸ್ಯರು ಮನಸ್ತಾಪ ಮಾಡಿಕೊಂಡಿದ್ದಾರಂತೆ. ದರ್ಶನ್ ತಮ್ಮ ಸ್ವಾರ್ಥಕ್ಕಾಗಿ ನಮ್ಮನ್ನ ಇಲ್ಲಿ ಕೊಳೆಯುವಂತೆ ಮಾಡಿದ್ದಾರೆ. ಚಿತ್ರದುರ್ಗದ ಆರೋಪಿಗಳಾದ ಅನ್ಬುಕುಮಾರ್ ಹಾಗೂ ಜಗದೀಶ್ ಅಸಮಾಧಾನ ಹೊರ ಹಾಕುತ್ತಿದ್ದಾರಂತೆ. ಬೇರೆ ಜೈಲಿಗೆ ಶಿಫ್ಟ್ ಮಾಡಿದ್ದರೇ ನಮ್ಮ ಪೋಷಕರಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುತ್ತಿತ್ತು. ಇವರ ಅನುಕೂಲಕ್ಕೆ ಬೇರೆ ಜೈಲಿಗೆ ಹೋಗದಂತೆ ಮಾಡಿಕೊಂಡರು ಎಂದು ಆರೋಪಿಗಳಾದ ಜಗದೀಶ್, ಅನ್ಬುಕುಮಾರ್ ದರ್ಶನ್ ಗ್ಯಾಂಗ್ ಉಳಿದ ಸದಸ್ಯರ ಬಳಿ ಅಸಮದಾನ ಹೊರಹಾಕುತ್ತಿದ್ದಾರಂತೆ. ಇದನ್ನೂ ಓದಿ: ಪಿಜಿಯಲ್ಲಿ ಯುವತಿ ಅನುಮಾನಾಸ್ಪದ ಸಾವು – ನೇತಾಡುತ್ತಿದ್ದ ಶವ ಕಂಡು ಹೊರಗೆ ಓಡಿದ ವಿದ್ಯಾರ್ಥಿನಿಯರು