ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಫೋಟೊ ಕಳಿಸಿದ್ದು ದೃಢ

By
1 Min Read

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಪವಿತ್ರಾಗೌಡಗೆ (Pavithra Gowda) ರೇಣುಕಾಸ್ವಾಮಿ ಅಶ್ಲೀಲ ಫೋಟೊ ಕಳುಹಿಸಿರುವುದು ದೃಢಪಟ್ಟಿದೆ.

ಪವಿತ್ರಾಗೌಡ ಅಕೌಂಟಿಗೆ ರೇಣುಕಾಸ್ವಾಮಿ ಬಳಸುತ್ತಿದ್ದ ಅಕೌಂಟಿನಿಂದ ಪೋಟೊ ಕಳಿಸಿದ್ದ. ರೇಣುಕಾಸ್ವಾಮಿ ಅಶ್ಲೀಲ ಫೋಟೊ ಕಳಿಸಿದ್ದರ ಬಗ್ಗೆ ಪೊಲೀಸರು ಖಚಿತಪಡಿಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ – ಇಂದು ಚಾರ್ಜ್‌ಶೀಟ್‌ ಸಲ್ಲಿಕೆ ಡೌಟ್!

ರೇಣುಕಾಸ್ವಾಮಿ ಪೋಟೊ ಕಳಿಸಿರುವ ಬಗ್ಗೆ ಮಾಹಿತಿ ನೀಡುವಂತೆ ಕಾಮಾಕ್ಷಿಪಾಳ್ಯ ಪೊಲೀಸರು ಪತ್ರ ಬರೆದಿದ್ದರು. ಪೊಲೀಸರ ಮನವಿಗೆ ಸ್ಪಂದಿಸಿರುವ ಇನ್‌ಸ್ಟಾಗ್ರಾಂ ಮಾಹಿತಿ ಕೊಟ್ಟಿದೆ.

ಪವಿತ್ರಾಗೌಡಗೆ ಕಳುಹಿಸಿದ್ದ ಮೇಸೆಜ್‌ಗಳು ಹಾಗೂ ಅಶ್ಲೀಲ ಪೋಟೊ ಬಗ್ಗೆ ಇನ್‌ಸ್ಟಾಗ್ರಾಂ ಖಚಿತಪಡಿಸಿದೆ. ಈ ಮಾಹಿತಿಯನ್ನು ಪೊಲೀಸರು ಚಾರ್ಜ್ಶೀಟ್ ಸೇರಿಸಿದ್ದಾರೆ. ಇದನ್ನೂ ಓದಿ: ದರ್ಶನ್‌ ಗ್ಯಾಂಗ್‌ನ ಮತ್ತಿಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನು ಒಂದೆರಡು ದಿನದಲ್ಲಿ ಚಾರ್ಜ್ಶೀಟ್ ಸಲ್ಲಿಸಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

Share This Article