ಸೆ. 6ರಿಂದ 6 ರಿಂದ 8ನೇ ತರಗತಿ ಆರಂಭ – ದಕ್ಷಿಣ ಕನ್ನಡ, ಕೊಡಗಿನಲ್ಲಿ ನಿರ್ಬಂಧ ಮುಂದುವರಿಕೆ

Public TV
1 Min Read

ಬೆಂಗಳೂರು: ಶೇ.2ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ದರ ಕಡಿಮೆ ಇರುವ ತಾಲೂಕುಗಳಲ್ಲಿ ಸೆಪ್ಟೆಂಬರ್ 6ರಿಂದ 6 ರಿಂದ 2ನೇ ತರಗತಿ ಆರಂಭಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ತರಗತಿ ದಿನ ಬಿಟ್ಟು ದಿನ ತರಗತಿಗಳು ನಡೆಯಲಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದರು. ಸೋಮವಾರದಿಂದ ಶುಕ್ರವಾರದವರೆಗೆ ಶಾಲೆ ನಡೆಯಲಿದ್ದು, ಶನಿವಾರ ಮತ್ತು ಭಾನುವಾರ ಶಾಲೆಗಳ ಸ್ಯಾನಿಟೈಸಿಂಗ್ ಕೆಲಸ ಮಾಡಲಾಗುವುದು.

ಕೇರಳದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಅಲ್ಲಿಂದ ಬರುವ ಜನರಿಗೆ ಏಳು ದಿನ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್. ಏಳು ದಿನಗಳ ಬಳಿಕ ಕೋವಿಡ್ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಕೇರಳ ಗಡಿಯಲ್ಲಿರುವ ದಕ್ಷಿಣ ಕನ್ನಡ, ಕೊಡಗಿನಲ್ಲಿ ನಿರ್ಬಂಧ ಮುಂದುವರಿಯಲಿದೆ. ಉಡುಪಿ, ಚಿಕ್ಕಮಗಳೂರು, ಮೈಸೂರು, ಹಾಸನ, ಕೋಲಾರ, ಕಲಬುರಗಿಗಳಲ್ಲಿ ಕೋವಿಡ್ ಸೋಂಕು ಹರಡುವಿಕೆ ಪ್ರಮಾಣ ಶೇ.1.5ಕ್ಕಿಂತ ಕಡಿಮೆ ಇರುವ ಕಾರಣ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ವೀಕೆಂಡ್ ಕರ್ಫ್ಯೂ  ಮುಂದುವರಿಯಲಿದೆ.

ಮದುವೆ ಸಮಾರಂಭಕ್ಕೆ ಶೇ. 50 ರಷ್ಟು ಅನುಮತಿ ನೀಡಲಾಗಿದೆ. ಕಲ್ಯಾಣ ಮಂಟಪಗಳಲ್ಲಿ ಗರಿಷ್ಠ 400 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಸಂಬಂಧ ಕಲ್ಯಾಣ ಮಂಟಪಗಳ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಭಾರತದಲ್ಲಿರೋದು ಬ್ರಿಟಿಷರ ಗುಲಾಮಗಿರಿ ಎಜುಕೇಶನ್ ಸಿಸ್ಟಮ್: ರಿಷಬ್ ಶೆಟ್ಟಿ ಆಕ್ರೋಶ

2,912 ಗ್ರಾಮ ಪಂಚಾಯತಿ ಗಳಲ್ಲಿ ಪಾಸಿಟಿವ್ ದರ ಶೂನ್ಯವಿದೆ. 6,472 ಮಕ್ಕಳ ಸ್ಯಾಂಪಲ್ ಸಂಗ್ರಹ ಮಾಡಲಾಗಿದ್ದು, ಇದರಲ್ಲಿ 14 ಮಕ್ಕಳಿಗೆ ಮಾತ್ರ ಪಾಸಿಟಿವ್ ಬಂದಿದೆ. ಗಣೇಶ ಹಬ್ಬಕ್ಕೂ ಮುನ್ನವೇ ಆರರಿಂದ ಎಂಟನೇ ತರಗತಿಗಳು ಶೇ.50ರಷ್ಟು ಸಾಮರ್ಥ್ಯದೊಂದಿಗೆ ಆರಂಭಿಸಲಾಗುತ್ತದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *