ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬಜೆಟ್‍ನಲ್ಲಿ ಹೆಚ್ಚು ಅನುದಾನ ನೀಡುವಂತೆ ಸಿಎಂಗೆ ಮನವಿ

Public TV
2 Min Read

ಬೆಂಗಳೂರು: 2022ರ ಬಜೆಟ್‍ನಲ್ಲಿ ಹಿಂದುಳಿದ ವರ್ಗಗಳ ಪ್ರತಿಯೊಂದು ಅಭಿವೃದ್ದಿ ನಿಗಮಗಳಿಗೆ ಹೆಚ್ಚಿನ ಮೊತ್ತದ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಮ್.ಸಿ. ವೇಣುಗೋಪಾಲ್ ನೇತೃತ್ವದ ತಂಡ ಭೇಟಿ ನೀಡಿ ಮನವಿ ಸಲ್ಲಿಸಿದೆ.

2022ರ ಸಾಲಿನ ಬಜೆಟ್‍ನಲ್ಲಿ ಹಿಂದುಳಿದ ವರ್ಗಗಳ ಪ್ರತಿಯೊಂದು ನಿಗಮಗಳಿಗೆ 50 ಕೋಟಿ ಅನುದಾನ ನೀಡಬೇಕು. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ, ವಿದ್ಯಾರ್ಥಿ ನಿಲಯಗಳಿಗೆ, ವಿದ್ಯಾರ್ಥಿ ವೇತನಕ್ಕೆ ಮತ್ತು ದೇವರಾಜ ಅರಸು ಅಭಿವೃದ್ಧಿ ನಿಗಮಕ್ಕೆ ಒಟ್ಟು 50,000 ಕೋಟಿ ರೂ. ಅನುದಾನ ನೀಡಬೇಕು ಎಂದು ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ಹಿಜಬ್ ಪರಿಸ್ಥಿತಿ ಬಿಗಡಾಯಿಸಲು ಕಾಂಗ್ರೆಸ್ ನಾಯಕರು ಕಾರಣ: ಬಿಸಿ ನಾಗೇಶ್

ಇದೇ ವೇಳೆ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಬಾರದು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ನೀಡಬೇಕು. ಹೆಚ್. ಕಾಂತರಾಜ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಜಾರಿಗೊಳಿಸಬೇಕು, ಸುಭಾಷ್ ಅಡಿ ಸಮಿತಿಯನ್ನು ರದ್ದು ಪಡಿಸಬೇಕು. ಹಿಂದುಳಿದ ವರ್ಗಗಳ ಕೇಂದ್ರ ಸರ್ಕಾರದ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ – ಉಪಜಾತಿಗಳನ್ನು ಸೇರ್ಪಡೆಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದೆ.

ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಮನವಿಗೆ ಸ್ಪಂದಿಸಿದ ಸಿಎಂ ಹಿಂದುಳಿದ ವರ್ಗದ ಆಯೋಗ ವರದಿ ನೀಡುವ ತನಕ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಎಮ್. ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಶಿಕ್ಷಣ ಸಂಸ್ಥೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ: ಕಮಲ್ ಪಂತ್

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ರಾಜ್ಯದ ಅತಿ ಹಿಂದುಳಿದ 197 ಜಾತಿಗಳನ್ನೊಳಗೊಂಡ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಮ್.ಸಿ. ವೇಣುಗೋಪಾಲ್, ಕಾರ್ಯದರ್ಶಿ ಎಮ್. ನಾಗರಾಜ್ ಹಾಗೂ ಖಜಾಂಚಿ ಎಲ್.ಎ. ಮಂಜುನಾಥ್, ಪದಾಧಿಕಾರಿಗಳಾದ ಎನ್. ಶಿವಂಶಕರ್, ಪಿ.ಆರ್. ರಮೇಶ್, ನೆ.ಲ. ನರೇಂದ್ರ ಬಾಬು, ರಾಜ್ಯ ಕ್ಷತ್ರಿಯ ಸಂಘದ ಅಧ್ಯಕ್ಷ ಎನ್. ಗಣೇಶ್ ರಾಜ್, ಕಾರ್ಯದರ್ಶಿ ಚಂದ್ರ ಶೇಖರ್ ಪಿ. ರಾಜು, ತೆಲುಗು ವಿಜ್ಞಾನ ಸಮಿತಿಯ ಅಧ್ಯಕ್ಷ ಎ.ಆರ್. ರಾಧಾಕೃಷ್ಣ, ಮೊದಲಾದವರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *