ತ.ನಾಡಿಗೆ ಕಾವೇರಿ ನೀರು ಹರಿಸದಂತೆ ಮನವಿ – ಗಜೇಂದ್ರ ಸಿಂಗ್ ಭೇಟಿಯಾದ ರಾಜ್ಯ ರೈತರ ನಿಯೋಗ

Public TV
2 Min Read

ನವದೆಹಲಿ: ಬರಗಾಲದ ಸಂಕಷ್ಟದಲ್ಲಿರುವ ರೈತರಿಗೆ, ಜನಸಾಮಾನ್ಯರಿಗೆ ನೀರು ಉಳಿಸದೆ, ಕಾವೇರಿ ನೀರು ತಮಿಳುನಾಡಿಗೆ ಹರಿಸಿ ರಾಜ್ಯದ ರೈತರಿಗೆ ಕುಡಿಯುವ ನೀರಿಗೆ ಸಂಕಷ್ಟ ತಂದಿರುವ ನೀತಿಯನ್ನು ಸರಿಪಡಿಸುವಂತೆ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ (Cauvery Water Management Board) ಅವೈಜ್ಞಾನಿಕ ಆದೇಶಕ್ಕೆ ತಡೆ ನೀಡುವಂತೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಪರವಾಗಿ ರೈತ ನಾಯಕ ಕುರುಬೂರು ಶಾಂತಕುಮಾರ್ (Kuruburu Shanthakumar) ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಅವರಿಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ (New Delhi) ಶೇಖಾವತ್ ನಿವಾಸದಲ್ಲಿ ಭೇಟಿಯಾದ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನಿಯೋಗ, ಕಾವೇರಿ ನೀರು ಹರಿಸಲು ಪ್ರಾಧಿಕಾರ ನೀಡಿರುವ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಿತು. ಸುಮಾರು 20 ನಿಮಿಷಗಳ ಚರ್ಚೆಯಲ್ಲಿ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ – ನ.7 ಕ್ಕೆ ಮೊದಲ, ನ.30 ರಂದು ಕೊನೆ ಚುನಾವಣೆ

ಕರ್ನಾಟಕ ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ. ಬರಗಾಲಕ್ಕೆ 195 ತಾಲೂಕುಗಳು ತುತ್ತಾಗಿ 250ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾವೇರಿ ಜಲನಯನ ಭಾಗದ 38 ತಾಲೂಕುಗಳು ಬರಗಾಲಕ್ಕೆ ತುತ್ತಾಗಿ ರೈತರು ಯಾವುದೇ ಬೆಳೆ ಬೆಳೆದಿಲ್ಲ. ಕಾವೇರಿ ವ್ಯಾಪ್ತಿಗೆ ಬರುವ ಬೆಂಗಳೂರಿನಲ್ಲಿ 1.30 ಕೋಟಿ ಜನರಿಗೆ ಕುಡಿಯುವ ನೀರಿನ ಸಂಕಷ್ಟ ಬಂದಿದೆ. ಇಂಥ ಸಂದಿಗ್ಧ ಸಮಯದಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ಪ್ರತಿನಿತ್ಯ 5,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸಬೇಕೆಂಬ ಅವೈಜ್ಞಾನಿಕ ಆದೇಶವನ್ನು ಹೊರಡಿಸಿತ್ತು. ಇದನ್ನೂ ಓದಿ: ಇಸ್ರೇಲ್-ಹಮಾಸ್ ಯುದ್ಧ; ಚಿನ್ನ, ಬೆಳ್ಳಿ ದರದ ಮೇಲೆ ಎಫೆಕ್ಟ್

ಆದೇಶ ಪಾಲನೆಗಾಗಿ ತಮಿಳನಾಡಿಗೆ ಕಾವೇರಿ ನೀರನ್ನು ಹರಿಸಲಾಗುತ್ತಿದ್ದು, ಇದರಿಂದ ಕಾವೇರಿ ಅಚ್ಚುಕಟ್ಟು ಪ್ರದೇಶದ ಜಲಾಶಯದಲ್ಲಿ ನೀರು ಕಡಿಮೆಯಾಗುತ್ತಿದೆ. ಇದರಿಂದ ಜನರಿಗೆ ಆತಂಕವಾಗಿದೆ. ಪ್ರಾಧಿಕಾರದ ನಿರ್ಧಾರದ ವಿರುದ್ಧ ಬೆಂಗಳೂರು ನಗರದಲ್ಲಿ ಎರಡು ಬಾರಿ ಜನಸಾಮಾನ್ಯರೇ ಶಾಂತಿಯುತ ಬಂದ್ ಆಚರಣೆ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ತ.ನಾಡಿಗೆ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಕೇಂದ್ರ ನಿರ್ದೇಶನ ನೀಡಬೇಕು: ವಿಧಾನಸಭೆಯಲ್ಲಿ ಸ್ಟಾಲಿನ್‌ ನಿರ್ಣಯ ಮಂಡನೆ

ರಾಜ್ಯದಲ್ಲಿ ಹೋರಾಟದ ನಂತರವೂ ಮಂಡಳಿ 3,000 ಕ್ಯೂಸೆಕ್ ನೀರು ಬಿಡಬೇಕೆಂಬ ಆದೇಶ ನೀಡಿರುವುದನ್ನು ಒಪ್ಪಿ, ರಾಜ್ಯ ಸರ್ಕಾರ ಮತ್ತೆ ನೀರು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸುವಂತೆ, ಕುಡಿಯುವ ನೀರು ಉಳಿಸುವಂತೆ ಶೇಖಾವತ್ ಅವರಿಗೆ ಮನವಿ ಮಾಡಲಾಯಿತು. ಇದೇ ವೇಳೆ ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಿ ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಇದರಿಂದ ನೀರಿನ ಬವಣೆ ಕಡಿಮೆಯಾಗಲಿದೆ ಎಂದು ಮನವಿ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಇಸ್ರೇಲ್‍ನಲ್ಲಿ ಸಿಲುಕಿದ್ದ 18,000 ಭಾರತೀಯರು ಸೇಫ್

ಸಭೆಯ ಬಳಿಕ ಮಾತನಾಡಿದ ಕಬ್ಬು ಬೆಳೆಗಾರರ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಕಾವೇರಿ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಮಾತುಕತೆ ನಡೆಸಿದೆ. ಮುಂದಿನ ಸಭೆಯಲ್ಲಿ ನೀರು ಹರಿಸದಂತೆ ಮನವಿ ಮಾಡಿದೆ. ಮೇಕೆದಾಟು ಬಗ್ಗೆ ಗಂಭೀರವಾಗಿ ಪರಿಶೀಲಿಸಲು ಕೋರಿದ್ದೇವೆ. ಜಲಶಕ್ತಿ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಇದನ್ನೂ ಓದಿ: 5 ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಇಂದು ಪ್ರಕಟ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್