ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

1 Min Read

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಮಹಿಳಾ ಮೀಸಲಾತಿ (Women’s Reservation Bill) ಸ್ವಾಗತಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಮಹಿಳಾ ಮೀಸಲಾತಿ ಕುರಿತು ಸಂಸತ್‌ನ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯುತ್ತಿದೆ. ಇದಕ್ಕೂ ಮೊದಲು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ‘ದೇಶವು ಮಹಿಳೆಯರ ಸಬಲೀಕರಣದಲ್ಲಿ ಐತಿಹಾಸಿಕ ಹೆಜ್ಜೆ ಇಡಲು ಸಜ್ಜಾಗಿದೆ’ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: PublicTV Explainer: ಮಹಿಳಾ ಮೀಸಲಾತಿ ಮಸೂದೆಯಲ್ಲಿ ಏನಿದೆ? ಕರ್ನಾಟಕದಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಎಷ್ಟಾಗಬಹುದು?

ಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ನಮ್ಮ ದೇಶವು ಮಹಿಳಾ ಸಬಲೀಕರಣದತ್ತ ಐತಿಹಾಸಿಕ ಹೆಜ್ಜೆ ಇಡಲಿದೆ. ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ನೀಡುವ ಗೌರವವು ರಾಷ್ಟ್ರಕ್ಕೆ ನೀಡುವ ಗೌರವವಾಗಿದೆ ಎಂದು ಮೋದಿ ಬರೆದುಕೊಂಡಿದ್ದಾರೆ.

ಪೋಸ್ಟ್‌ನಲ್ಲಿ, ಅಜ್ಞಾನವನ್ನು ಹೋಗಲಾಡಿಸುವಲ್ಲಿ ಮತ್ತು ಸಮಾಜವನ್ನು ಜ್ಞಾನದಿಂದ ಬೆಳಗಿಸುವಲ್ಲಿ ಮಹಿಳೆಯರ ಪಾತ್ರವನ್ನು ಎತ್ತಿ ತೋರಿಸುವ ಸಂಸ್ಕೃತ ಶ್ಲೋಕವನ್ನೂ ಮೋದಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಇದು 21ನೇ ಶತಮಾನದ ಅತ್ಯಂತ ದೊಡ್ಡ ನಿರ್ಧಾರ: ಮಹಿಳಾ ಮೀಸಲಾತಿಯನ್ನು ಹಾಡಿ ಹೊಗಳಿದ ಮೋದಿ

ಏಪ್ರಿಲ್ 16 ರಿಂದ 18 ರವರೆಗೆ ನಡೆಯಲಿರುವ ವಿಶೇಷ ಅಧಿವೇಶನವು 2029 ರ ಸಾರ್ವತ್ರಿಕ ಚುನಾವಣೆಗಳಿಂದ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ ಮಹಿಳಾ ಮೀಸಲಾತಿ ಕಾನೂನನ್ನು ಜಾರಿಗೆ ತರಲು ತಿದ್ದುಪಡಿಯನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ.

Share This Article