ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪುನಾರಂಭಿಸಿ: ಸೋನಿಯಾ ಗಾಂಧಿ

Public TV
1 Min Read

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ನಿಲ್ಲಿಸಲಾಗಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪುನರಾರಂಭಿಸುವಂತೆ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಒತ್ತಾಯಿಸಿದ್ದಾರೆ.

ಬುಧವಾರ ಲೋಕಸಭೆಯ ಚರ್ಚೆ ವೇಳೆ ಮಾತನಾಡಿದ ಅವರು, ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಶಾಲೆಗಳನ್ನು ಮುಚ್ಚುವುದರ ಜೊತೆಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯನ್ನು ಸಹ ನಿಲ್ಲಿಸಲಾಯಿತು.

ಕಳೆದ ವರ್ಷ ಪಿಎಂ-ಪೋಷನ್ ಎಂಬ ಹೆಸರಿನ ಮೂಲಕ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿತ್ತು. ಇದು ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, ಇದರಿಂದ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಬಹಳ ಪ್ರಯೋಜನವಾಗುತ್ತಿತ್ತು. ಕೊರೊನಾ ಲಾಕ್‍ಡೌನ್ ವೇಳೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಮಧ್ಯಾಹ್ನದ ಊಟ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದರು.

ಇದೇ ವೇಳೆ ಮೂರು ವರ್ಷದೊಳಗಿನ ಮಕ್ಕಳು, ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರಿಗೆ ಅಂಗನವಾಡಿಗಳ ಮೂಲಕ ಬಿಸಿಯೂಟವನ್ನು ನೀಡಬೇಕು. 2019-21ರ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಪ್ರಕಾರ, 2015-16ರ ಸಮೀಕ್ಷೆಗೆ ಹೋಲಿಸಿದರೆ, ಇತ್ತೀಚಿನ ವರ್ಷಗಳಲ್ಲಿ ಪೋಷಕಾಂಶ ಮತ್ತು ಬೆಳವಣಿಗೆಯಿಂದ ಬಳಲುತ್ತಿರುವ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಶೇಕಡಾವಾರು ಹೆಚ್ಚಾಗಿದೆ. ಇದು ಸಾಕಷ್ಟು ಆತಂಕಕಾರಿ ವಿಚಾರವಾಗಿರುವುದರಿಂದ ಸರ್ಕಾರವು ಮಧ್ಯಪ್ರವೇಶಿಸಬೇಕು ಎಂದು ತಿಳಿದರು.

Share This Article
Leave a Comment

Leave a Reply

Your email address will not be published. Required fields are marked *