ರೋಹಿಣಿ ಜೊತೆ ಕಿತ್ತಾಟ – ಮಾತನಾಡದಂತೆ ರೂಪಾಗೆ ನೀಡಿದ್ದ ತಡೆ ತೆರವು

Public TV
1 Min Read

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಐಪಿಎಸ್ ಅಧಿಕಾರಿ ಡಿ ರೂಪಾ (D roopa) ಮಾತನಾಡದಂತೆ ವಿಧಿಸಲಾಗಿದ್ದ ತಡೆಯನ್ನು ತೆರವುಗೊಳಿಸಲಾಗಿದೆ.

ಕಳೆದೆರಡು ತಿಂಗಳ ಹಿಂದೆ ಇಬ್ಬರು ಉನ್ನತ ಮಹಿಳಾ ಅಧಿಕಾರಿಗಳ ನಡುವಿನ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಹಿಣಿ ವಿರುದ್ಧ ಮಾತನಾಡದಂತೆ ರೂಪಾಗೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು. ಈ ಮಧ್ಯಂತರ ಆದೇಶವನ್ನು ರೂಪಾ ಪ್ರಶ್ನಿಸಿದ್ದು, ಇದೀಗ ನ್ಯಾಯಾಲಯ ಪ್ರತಿಬಂಧಕಾಜ್ಞೆಯನ್ನು ತೆರವುಗೊಳಿಸಿದೆ. ಇದನ್ನೂ ಓದಿ: ರಾಜ್ಯ ನಾಯಕರು ತಂದ ಪಟ್ಟಿ ನೋಡಿ ಮೋದಿ ಕೆಂಡ : ಬಿಜೆಪಿ ಸಭೆಯಲ್ಲಿ ಏನಾಯ್ತು?

ಈ ಹಿಂದೆ ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ಸಲ್ಲಿಸಿದ್ದರು. ರೋಹಿಣಿ ವಿರುದ್ಧ ಇರುವ ಆರೋಪ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ವೇಳೆ ರೂಪಾ ಅವರಿಂದ ವೈಯಕ್ತಿಕ ಮಟ್ಟದಲ್ಲಿ ವಾಗ್ದಾಳಿಗೆ ತುತ್ತಾಗಿದ್ದ ರೋಹಿಣಿಗೆ ಕೋರ್ಟ್ ಮೂಲಕ ಬಿಗ್ ರಿಲೀಫ್ ಸಿಕ್ಕಿತ್ತು.

ರೂಪಾಗೆ ಸೋಷಿಯಲ್ ಮೀಡಿಯಾ ಸೇರಿದಂತೆ ಯಾವುದೇ ರೀತಿಯ ಮಾಧ್ಯಮಗಳಲ್ಲಿ ರೋಹಿಣಿ ವಿರುದ್ಧ ಮಾನಹಾನಿಕರ ಹೇಳಿಕೆ, ಬರಹಗಳನ್ನು ಪೋಸ್ಟ್ ಮಾಡದಂತೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿತ್ತು. ಇದನ್ನೂ ಓದಿ: ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೆ ಯಾವುದೇ ಕಾರಣಕ್ಕೂ ಗೆಲ್ಲಲ್ಲ: HDK

Share This Article