ಚಾರ್‌ಧಾಮ್ ಯಾತ್ರೆಗಿದ್ದ ನಿರ್ಬಂಧ ತೆರವು

Public TV
1 Min Read

ನವದೆಹಲಿ: ತೀವ್ರ ಮಳೆ ಮತ್ತು ಗುಡ್ಡ ಕುಸಿತದ ಕಾರಣಗಳಿಂದ ನಿಷೇಧ ಹೇರಲಾಗಿದ್ದ ಚಾರ್‌ಧಾಮ್ ಯಾತ್ರೆ (Char Dham Yatra) ಮತ್ತೆ ಪುನಾರಂಭಗೊಂಡಿದೆ.

ಮಳೆ ಪ್ರಮಾಣ ತಗ್ಗಿದ ಹಿನ್ನೆಲೆ ಯಾತ್ರೆಗೆ ಮತ್ತೆ ಅವಕಾಶ ಮಾಡಿಕೊಡುವಂತೆ ಗರ್ವಾಲ್ ವಿಭಾಗೀಯ ಆಯುಕ್ತ ವಿನಯ್ ಶಂಕರ್ ಪಾಂಡೆ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಚಾರ್‌ಧಾಮ್ ಯಾತ್ರೆಗಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ. ಯಾತ್ರಾ ಮಾರ್ಗದಲ್ಲಿರುವ ಜಿಲ್ಲೆಗಳ ಆಯಾ ಜಿಲ್ಲಾಧಿಕಾರಿಗಳಿಗೆ ಆಯಾ ಜಿಲ್ಲೆಗಳಲ್ಲಿನ ಹವಾಮಾನ ಪರಿಸ್ಥಿತಿಗಳನ್ನು ಅವಲೋಕಿಸಿ ವಾಹನಗಳನ್ನು ನಿಲ್ಲಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ:  ಕಸದ ಲಾರಿಯಲ್ಲಿ ಶವ ಪತ್ತೆ | ದಿನಾ ಕುಡಿದು ಬಂದು ರಂಪಾಟ ಮಾಡಿದ್ದಕ್ಕೆ ಮಹಿಳೆಯ ಕೊಲೆ!

ಇನ್ನು ಜುಲೈ 3ರರಿಂದ ಅಮರನಾಥ ಯಾತ್ರೆ ಹಿನ್ನೆಲೆ ಜಮ್ಮು ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಜಮ್ಮುನಿಂದ ಕಾಶ್ಮೀರಕ್ಕೆ ಸಂಪರ್ಕಿಸುವ ಹೆದ್ದಾರಿ ಹಾಗೂ ಶ್ರೀನಗರದಿಂದ ಬಾಲ್ಟಾಲ್ ಬೇಸ್ ಕ್ಯಾಂಪ್ ರಸ್ತೆಯಲ್ಲಿ ಭಾರಿ ಭದ್ರತೆ ನೀಡಲಾಗಿದೆ. ಕೇಂದ್ರದ ಮೀಸಲು ಪಡೆಗಳಿಂದ ಭದ್ರತೆ ಹೆಚ್ಚಿಸಿದ್ದು, ಯಾತ್ರೆಯಲ್ಲಿ ಲಕ್ಷಾಂತರ ಜನರು ಭಾಗಿಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಗಮನಿಸಿ, ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಲಿಸ್ಟ್‌ ಔಟ್‌

Share This Article