ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳು ಪುನರಾರಂಭ: ಸಿದ್ದರಾಮಯ್ಯ

By
2 Min Read

ಬೆಂಗಳೂರು: ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ (Minorities) ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಶುಕ್ರವಾರ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ಸಂದರ್ಭದಲ್ಲಿ ಮಾತನಾಡಿದರು. ಸರ್ಕಾರ ಘೋಷಿಸಿದಂತೆ 5 ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ ಚಳವಳಿಗಳೊಂದಿಗೆ ಗುರುತಿಸಿಕೊಂಡಿದೆ. ಸಾಹಿತ್ಯ ಕ್ಷೇತ್ರ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ವಿದ್ಯಾರ್ಥಿ ಹಾಗೂ ದಲಿತ ಚಳವಳಿಗಳು ಹಾಗೂ ಜನಪರವಾದ ಇತರ ಹೋರಾಟಗಳೊಂದಿಗೆ ಗುರುತಿಸಿಕೊಂಡಿದೆ. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಚಾವಡಿ ಒತ್ತು ನೀಡಿದೆ. ತನ್ನ ಧರ್ಮದ ಕೋಮುವಾದವನ್ನು ವಿರೋಧಿಸುತ್ತಲೇ ಇನ್ನೊಂದರ ಕೋಮುವಾದವನ್ನು ವಿರೋಧಿಸುವ ಕೆಲಸ ಮಾಡುತ್ತಿದೆ ಎಂದು ಸಭೆಗೆ ತಿಳಿಸಲಾಯಿತು. ಇದನ್ನೂ ಓದಿ: 3 ವಲಯ, 3 ಪ್ರತ್ಯೇಕ ಸಭೆ – ಲೋಕಸಭಾ ಚುನಾವಣೆಗೆ ತಯಾರಾದ ಬಿಜೆಪಿ

ಕಳೆದ 5 ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳಲ್ಲಿ ಅನುದಾನ ಹೆಚ್ಚಳ, ವಸತಿ ಶಾಲೆ, ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸುವ ಕುರಿತು ಬೇಡಿಕೆಗಳನ್ನು ಸಲ್ಲಿಸಲಾಯಿತು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಚಾವಡಿಯ ಅಧ್ಯಕ್ಷ ಮುಜಾಫರ್ ಅಸಾದಿ, ಮಸ್ತಾನ್ ಬಿರಾದರ್, ಬಾನು ಮುಷ್ತಾಖ್, ರಹಮತ್ ತರೀಕೆರೆ ಮೊದಲಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಶಕ್ತಿ ಯೋಜನೆ ರದ್ದು ಮಾಡಿ- ಸಿಎಂಗೆ ಆಟೋ ಚಾಲಕರ ಮನವಿ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್