ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಉಗ್ರರಿಂದ ಗುಂಡೇಟು – ಜಮ್ಮು ಕಾಶ್ಮೀರದ ನಿವೃತ್ತ ಪೊಲೀಸ್‌ ಅಧಿಕಾರಿ ಬಲಿ

Public TV
1 Min Read

ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ಬಾರಾಮುಲ್ಲಾದಲ್ಲಿ ನಿವೃತ್ತ ಪೊಲೀಸ್‌ ಅಧಿಕಾರಿಯನ್ನು ಮಸೀದಿಯ (Mosque) ಒಳಗಡೆಯೇ ಉಗ್ರರು (Terrorist) ಹತ್ಯೆ ಮಾಡಿದ್ದಾರೆ.

ಮೊಹಮ್ಮದ್‌ ಶಾಫಿ ಉಗ್ರರ ಗುಂಡೇಟಿಗೆ ಬಲಿಯಾದ ನಿವೃತ್ತ ಪೊಲೀಸ್‌ ಅಧಿಕಾರಿ. ಮಸೀದಿಯ ಒಳಗಡೆ ಪ್ರಾರ್ಥನೆ ಮಾಡುತ್ತಿರುವಾಗಲೇ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಪೊಲೀಸರು ಈಗ ಆ ಪ್ರದೇಶವನ್ನು ಸುತ್ತುವರಿದಿದ್ದು ಉಗ್ರರ ಪತ್ತೆಗೆ ಮುಂದಾಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಪೊಲೀಸರು ಮತ್ತು ಸೈನಿಕರ ಮೇಲೆ ಕಣಿವೆ ರಾಜ್ಯದಲ್ಲಿ ದಾಳಿಗಳು ಹೆಚ್ಚಾಗುತ್ತಿದೆ.   ಇದನ್ನೂ ಓದಿ: ಶಾಸಕ ಬಿ.ಆರ್ ಪಾಟೀಲ್ ಆಪ್ತ ಬಸವರಾಜ್ ಚೌಲ್ ಪುತ್ರನ ಹತ್ಯೆ

ಗುರುವಾರ ಮಧ್ಯಾಹ್ನ 3:45ಕ್ಕೆ ರಾಜೌರಿಯ ಪೂಂಚ್ ಪ್ರದೇಶದಲ್ಲಿ ಡೇರಾ ಕಿ ಗಲಿ ಮೂಲಕ ಸಾಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಐವರು ಯೋಧರು (Five Soldiers ) ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದರು.

 

Share This Article