ನೀರು ಹರಿಸಲು ಸಾಧ್ಯವಿಲ್ಲ; CWMA, ಸುಪ್ರೀಂಗೆ ಸರ್ಕಾರದಿಂದ ಮರುಪರಿಶೀಲನಾ ಅರ್ಜಿ ಸಲ್ಲಿಕೆ

Public TV
2 Min Read

ಬೆಂಗಳೂರು: ಅಕ್ಟೋಬರ್ 15ರ ವರೆಗೂ ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸಬೇಕು ಎಂಬ ಸಿಡಬ್ಲ್ಯೂಎಂಎ ಆದೇಶವನ್ನು ಮರು ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಸುಪ್ರೀಂ ಕೋರ್ಟ್‌ಗೆ (Supreme Court) ಶನಿವಾರ ರಾಜ್ಯ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ತಮಿಳುನಾಡಿಗೆ ನೀರು (TamilNadu Water) ಹರಿಸಲು ಸಾಧ್ಯವಿಲ್ಲ ಮತ್ತು ಆದಷ್ಟು ಶೀಘ್ರ ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಅನುಮತಿ ನೀಡಬೇಕೆಂದು ನಮ್ಮ ಸರ್ಕಾರವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದೆ. ರಾಜ್ಯದಲ್ಲಿ ಕೃಷಿ, ಕುಡಿಯುವ ನೀರು ಮತ್ತು ಕಾರ್ಖಾನೆಗಳಿಗೆ ಬೇಕಿರುವಷ್ಟು ಪ್ರಮಾಣದ ನೀರು ನಮ್ಮಲ್ಲಿ ಲಭ್ಯವಿಲ್ಲದೇ ಇರುವುದರಿಂದ ಇಂದಿನ ನಮ್ಮ ಮನವಿಯನ್ನು ನಿರ್ವಹಣಾ ಪ್ರಾಧಿಕಾರ ಪುರಸ್ಕರಿಸಲಿದೆ ಎಂದು ನಂಬಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇನ್ನೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ಶನಿವಾರವೂ 3,000 ಕ್ಯೂಸೆಕ್ ನೀರು ಹರಿಸಲಾಗಿದೆ. KRS ಡ್ಯಾಂನಿಂದ 2,176 ಕ್ಯೂಸೆಕ್, ಕಬಿನಿ ಜಲಾಶಯದಿಂದ 1,000 ಕ್ಯೂಸೆಕ್ ನೀರು ಹರಿಸಲಾಗಿದೆ. ಇದನ್ನೂ ಓದಿ: ಭಾರತದ ವಿರುದ್ಧ ಯುದ್ಧ ರೂಪಿಸಲು 2 ರಾಷ್ಟ್ರಗಳ ಭಯೋತ್ಪಾದಕರೊಂದಿಗೆ ಸಂಚು; ಮಣಿಪುರದಲ್ಲಿ ಶಂಕಿತ ಅರೆಸ್ಟ್

ತಮಿಳುನಾಡಿಗೆ ನೀರು ಹರಿಸದಂತೆ ಮಂಡ್ಯ, ಚಾಮರಾಜನಗರದಲ್ಲಿ ಪ್ರತಿಭಟನೆ ಮುಂದುವರಿದಿದೆ. ಮಂಡ್ಯದ ಮಳವಳ್ಳಿಯಲ್ಲಿ ಮಾಜಿ ಶಾಸಕ ಅನ್ನದಾನಿ ನೇತೃತ್ವದಲ್ಲಿ ಹೋರಾಟಗಾರರು ಸಿರಿಂಜ್‌ ಮೂಲಕ ರಕ್ತ ಸಂಗ್ರಹಿಸಿ ಕಾವೇರಿ ನದಿಗೆ ಸುರಿಯುವ ಯತ್ನಕ್ಕೆ ಮುಂದಾಗಿದ್ದರು. ಇದಕ್ಕೆ ಪೊಲೀಸರು ಅವಕಾಶ ಕೊಡಲಿಲ್ಲ. ಶ್ರೀರಂಗಪಟ್ಟಣದಲ್ಲಿ ಭೂಮಿ ತಾಯಿ ಹೋರಾಟ ಸಮಿತಿ ಚಾಟಿ ಚಳವಳಿ ನಡೆಸಿತು.

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ತೆಂಗಿನಚಿಪ್ಪು ಹಿಡಿದು, ಕಿವಿಗೆ ಹೂವು ಇಟ್ಟುಕೊಂಡು ಆಕ್ರೋಶ ವ್ಯಕ್ತಪಡಿಸಿದರು. ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಮಳೆಯ ನಡುವೆ ಬೀದಿಗಿಳಿದು ಕನ್ನಡಪರ ಸಂಘಟನೆಗಳು ಪ್ರತಿಭಟಿಸಿದ್ದಾರೆ.  ಇದನ್ನೂ ಓದಿ: ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್‌, ಹೇರ್ ಸ್ಟೈಲ್ ಮಾಡಿಕೊಂಡವರು ಮುಂದೆ ಬರ್ತಾರೆ: RJD ನಾಯಕನ ವಿವಾದಿತ ಹೇಳಿಕೆ

ಪುಣಜನೂರು ಚೆಕ್‌ಪೋಸ್ಟ್‌ನಲ್ಲಿ ತಮಿಳುನಾಡು ಬಸ್ ತಡೆಯಲು ಮುಂದಾದರು. ಮೆಜೆಸ್ಟಿಕ್‌ನಲ್ಲಿ ಕನ್ನಡ ಒಕ್ಕೂಟ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್