ಯುಗಾದಿ ಹಬ್ಬದಂದೇ ರಿಷಬ್ ಶೆಟ್ಟಿ ಮನೆಗೆ ಪುಟಾಣಿ ಹೀರೋ ಎಂಟ್ರಿ

Public TV
1 Min Read

ಬೆಂಗಳೂರು: ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ಬೆಲ್ ಬಾಟಂ’ ಸಿನಿಮಾದ ಯಶಸ್ವಿನ ಸಂತಸದಲ್ಲಿದ್ದರು. ಈಗ ಯುಗಾದಿ ಹಬ್ಬದಲ್ಲೇ ಅವರ ಪತ್ನಿ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ಈ ಮೂಲಕ ತಂದೆಯಾದ ಖುಷಿಯಲ್ಲಿ ರಿಷಬ್ ಶೆಟ್ಟಿ ಇದ್ದಾರೆ.

ನಟ ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಅವರಿಗ ಗಂಡು ಮಗು ಜನಿಸಿದೆ. ಈ ಬಗ್ಗೆ ಸ್ವತಃ ರಿಷಬ್ ಶೆಟ್ಟಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ರಿಷಬ್ ಶೆಟ್ಟಿ ಅವರು, “Yes…… it’s a Hero” ಎಂದು ಬರೆದ ಹುಡುಗನ ಎಮೋಜಿ ಹಾಕಿದ್ದಾರೆ. ಜೊತೆಗೆ ಆಸ್ಪತ್ರೆಯ ಬೆಡ್ ಮೇಲಿರುವ ಪತ್ನಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ಅವರು ಫ್ರೆಬವರಿ 9 ರಂದು 2017 ರಲ್ಲಿ ಮೂಲತಃ ಶಿವಮೊಗ್ಗದ ರಿಪ್ಪನ್ ಪೇಟೆಯ ಪ್ರಗತಿ ಅವರನ್ನು ಮದುವೆಯಾಗಿದ್ದರು. ಸದ್ಯಕ್ಕೆ ರಿಷಬ್ ಶೆಟ್ಟಿ ಅಭಿನಯದ ‘ಬೆಲ್ ಬಾಟಂ’ ಸಿನಿಮಾ 50 ದಿನಗಳನ್ನು ಪೂರೈಸಿ ಯಶಸ್ವಿ ಕಾಣುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *