Kantara Chapter 1 ಟೈಟಲ್ ಟೀಸರ್ ರಿಲೀಸ್- ರಿಷಬ್ ಶೆಟ್ಟಿ ಲುಕ್‌ಗೆ ಫ್ಯಾನ್ಸ್ ಫಿದಾ

Public TV
1 Min Read

ರಾಷ್ಟ್ರ ಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ(Rishab Shetty) ನಟನೆಯ ‘ಕಾಂತಾರ ಚಾಪ್ಟರ್ 1’ರ (Kantara Chapter 1) ಟೈಟಲ್ ಟೀಸರ್ ರಿಲೀಸ್ ಆಗಿದೆ. ರಿಷಬ್ ಶೆಟ್ಟಿ ಕಣ್ನೋಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಸಿನಿಮಾದ ಮೊದಲ ಟೀಸರ್ ಎಲ್ಲರ ಗಮನ ಸೆಳೆದಿದೆ. ಇದನ್ನೂ ಓದಿ:ಅರ್ಹತೆ ಇಲ್ಲದವರಿಗೆ ಬಿಪಿಎಲ್ ಕಾರ್ಡ್ ಸಿಕ್ತಿದೆ, ಸರ್ಕಾರ ಪರಿಷ್ಕರಣೆ ಮಾಡಬೇಕು: ನಟ ಚೇತನ್

 

View this post on Instagram

 

A post shared by Hombale Films (@hombalefilms)


ರಿಷಬ್ ಶೆಟ್ಟಿ ಪ್ರತಿಭಾನ್ವಿತ ನಟ- ನಿರ್ದೇಶಕ ಅದರಲ್ಲಿ ಎರಡು ಮಾತಿಲ್ಲ. ಯಾವುದೇ ಪಾತ್ರ ಕೊಟ್ಟರೂ ಆ ಪಾತ್ರವೇ ತಾವಾಗಿ ಜೀವ ತುಂಬಿ ನಟಿಸುತ್ತಾರೆ. ಅದಕ್ಕೆ ಕಾಂತಾರ ಸಿನಿಮಾ ಸಾಕ್ಷಿ. ಇದೀಗ ಕಾಂತಾರ ಚಾಪ್ಟರ್ 1ರ ಮೂಲಕ ರಿಷಬ್ ಗಮನ ಸೆಳೆಯುತ್ತಿದ್ದಾರೆ. ಚಿತ್ರದ ಟೀಸರ್‌ನಲ್ಲಿ ರಿಷಬ್ ಕಣ್ಣಲ್ಲಿ ಬೆಳಕಿದೆ ಜೊತೆ ರಕ್ತಸಿಕ್ತ ಗೆಟಪ್‌ನಲ್ಲಿ ಕಾಣಿಸಿಕೊಂಡಿರೋದು ಅಭಿಮಾನಿಗಳಲ್ಲಿ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

2025ರ ಅಕ್ಟೋಬರ್ 2ರಂದು ಸಿನಿಮಾ ಬಿಡುಗಡೆ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ. ಏಕಕಾಲಕ್ಕೆ ಕನ್ನಡ, ಹಿಂದಿ, ಇಂಗ್ಲಿಷ್ ಹಾಗೂ ತೆಲುಗು ಭಾಷೆಗಳಲ್ಲಿ ಸಿನಿಮಾ ತೆರೆಯ ಮೇಲೆ ಬರಲಿದೆ ಎಂದು ಈಗಾಗಲೇ ಹೊಂಬಾಳೆ ಸಂಸ್ಥೆ ಘೋಷಿಸಿದೆ.

ಈಗಾಗಲೇ ಕೇವಲ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಪೋಸ್ಟರ್ ನೋಡಿದ ಅಭಿಮಾನಿಗಳು ಚಿತ್ರದ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಕಾಂತಾರ ಚಾಪ್ಟರ್ 1 ಸಿನಿಮಾ ಏಳು ಭಾಷೆಯಲ್ಲಿ ಬಿಡುಗಡೆಯಾಗಲಿದೆ.

Share This Article