ಕಾಂತಾರದಿಂದ ಗುಡ್ ನ್ಯೂಸ್ : ಟ್ರೇಲರ್ ರಿಲೀಸ್ ಡೇಟ್ ಫಿಕ್ಸ್

1 Min Read

ಹು ನಿರೀಕ್ಷಿತ ‘ಕಾಂತಾರ ಅಧ್ಯಾಯ 1’ (Kantara: Chapter 1) ಸಿನಿಮಾದ ಟ್ರೇಲರ್ (Trailer) ಇದೇ ಸೆಪ್ಟೆಂಬರ್ 22, 2025 ರಂದು ಮಧ್ಯಾಹ್ನ 12:40ಕ್ಕೆ ಅಧಿಕೃತವಾಗಿ ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲಂಸ್ (Hombale Films) ಇಂದು ಘೋಷಿಸಿದೆ. ಈ ಚಿತ್ರವು ಅಕ್ಟೋಬರ್ 2, 2025 ರಂದು ವಿಶ್ವಾದ್ಯಂತ ಅದ್ದೂರಿಯಾಗಿ ತೆರೆ ಕಾಣಲಿದೆ.

ರಿಷಬ್ ಶೆಟ್ಟಿ (Rishab Shetty) ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರವು, ಜಾಗತಿಕ ಮಟ್ಟದಲ್ಲಿ ಯಶಸ್ಸು ಕಂಡ ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿದೆ. ಕರಾವಳಿ ಕರ್ನಾಟಕದ ಅತೀಂದ್ರಿಯ ಲೋಕವನ್ನು ಅನಾವರಣಗೊಳಿಸುವ ಈ ಚಿತ್ರವು, ಪುರಾಣ, ಭಕ್ತಿ ಮತ್ತು ಅದೃಷ್ಟದ ನಡುವಿನ ಪೌರಾಣಿಕ ಕಥೆಯನ್ನು ಹೇಳುತ್ತದೆ. ಇದನ್ನೂ ಓದಿ: ಟಾಕ್ಸಿಕ್‌ ಫೈನಲ್‌ ಶೂಟಿಂಗ್‌ ಮುನ್ನ ಲಂಡನ್‌ಗೆ ಹಾರಿದ ಯಶ್!

ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಅವರ ಸಂಗೀತ, ಛಾಯಾಗ್ರಾಹಕ ಅರವಿಂದ್ ಎಸ್. ಕಶ್ಯಪ್ ಅವರ ದೃಶ್ಯ ವೈಭವ ಮತ್ತು ವಸ್ತ್ರ ವಿನ್ಯಾಸಕಿ ಪ್ರಗತಿ ಶೆಟ್ಟಿ ಅವರ ವಿಶಿಷ್ಟ ಕಲಾಕೃತಿಗಳು ಚಿತ್ರಕ್ಕೆ ಮೆರುಗು ನೀಡಲಿವೆ.

ರಿಷಬ್ ಶೆಟ್ಟಿ, ಜೊತೆಗೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಅವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಕಾಂತಾರ ಅಧ್ಯಾಯ 1’ ಚಿತ್ರವು ಕಲೆ, ಭಕ್ತಿ ಮತ್ತು ಶಕ್ತಿಯನ್ನು ಒಳಗೊಂಡಿದ್ದು, ಮತ್ತೊಮ್ಮೆ ಇತಿಹಾಸ ಸೃಷ್ಟಿಸಲು ಸಿದ್ಧವಾಗಿದೆ.

Share This Article