ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ

1 Min Read

ಉಡುಪಿ: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಹಾಗೂ ಪ್ರಗತಿ ಶೆಟ್ಟಿ (Pragathi Shetty) ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ (Kolluru Shri Mookambika Devi Temple) ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ.

ರಿಷಬ್ ಶೆಟ್ಟಿ, ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಗಳೊಂದಿಗೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ತಾಯಿಗೆ ಹಲವು ಪೂಜೆ ಕಾರ್ಯಗಳನ್ನು ನೆರವೇರಿಸಿದ್ದಾರೆ. ಜೊತೆಗೆ ರಿಷಬ್ ಶೆಟ್ಟಿ ದೇವಿಯ ರಥವನ್ನು ಎಳೆದಿದ್ದಾರೆ. ಇದನ್ನೂ ಓದಿ: ಮಹಾಶಿವರಾತ್ರಿ ಸಂಭ್ರಮ – ಕೋಲಾರದ ಸೋಮೇಶ್ವರ ದೇವಾಲಯದಲ್ಲೂ ವಿಶೇಷ ಪೂಜೆ

ಸದ್ಯ ತವರಿನಲ್ಲಿ ನೆಲೆಸಿರುವ ರಿಷಬ್ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ದೇವಿಯ ದರ್ಶನ ಕೈಗೊಂಡ ಬಳಿಕ ರಿಷಬ್ ದಂಪತಿಯನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

Share This Article