ಲಾರಿ, ಬಸ್ ಮುಖಾಮುಖಿ ಡಿಕ್ಕಿ- 6 ಮಂದಿ ಸ್ಥಳದಲ್ಲೇ ಸಾವು

Public TV
1 Min Read

ರಾಂಚಿ: ಗ್ಯಾಸ್ ತುಂಬಿದ ಲಾರಿ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ್ದು, 15 ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಜಾರ್ಖಂಡ್ ಪಾಕೂರ್ ಜಿಲೆಯಲ್ಲಿ ನಡೆದಿದೆ.

ಮಂಜು ಮುಸುಕಿದ ಕಾರಣ ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಈ ಭೀಕರ ಅಪಘಾತದಲ್ಲಿ 6 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬರ್ಹರ್ವಾದಿಂದ ದುಮ್ಕಾಗೆ ಹೋಗುತ್ತಿದ್ದ ಬಸ್ ಹೋಗುತ್ತಿತ್ತು. ಸಾಹಿಬ್ ಗಂಜ್ಗೋ-ಬಿಂದಪುರ ಹೆದ್ದಾರಿಯ ಕಮರ್ದಿಹಾ ಗ್ರಾಮದ ಬಳಿ ಅಪಘಾತವಾಗಿದ್ದು, ಸಾವು ನೋವು ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ದಿನದಲ್ಲಿ 50 ಸಾವಿರಕ್ಕೂ ಹೆಚ್ಚು ಕೋವಿಡ್-19 ಕೇಸ್!

ಅಮದಪಾರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡುತ್ತಿದ್ದಾರೆ. ಸ್ಥಳೀಯರ ಜೊತೆಗೂಡಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಕೊರೊನಾ ಸೋಂಕಿತರು 7 ದಿನದಲ್ಲಿ ರಿಕವರಿ ಹೊಂದಿದ್ರೂ, 14 ದಿನ ಕ್ವಾರಂಟೈನ್ ಕಡ್ಡಾಯ: WHO

Share This Article
Leave a Comment

Leave a Reply

Your email address will not be published. Required fields are marked *