`ಕೈ ಕಮಲ’ ಕ್ರೆಡಿಟ್ ಗಲಾಟೆ – ಬಿಜೆಪಿ ಶಾಸಕ ಚಾಲನೆ ನೀಡಿದ್ದ ಕಾಮಗಾರಿಗೆ ಮತ್ತೆ ಭೂಮಿ ಪೂಜೆ

By
1 Min Read

ಚಿಕ್ಕೋಡಿ: ಲಕ್ಷ್ಮಣ್ ಸವದಿ (Laxman Savadi) ಕ್ಷೇತ್ರ ಅಥಣಿಯಲ್ಲಿ ಕೈ (Congress) ಕಮಲ (BJP) ಮಧ್ಯೆ ಕ್ರೆಡಿಟ್ ಕಿತ್ತಾಟ ಶುರುವಾಗಿದೆ. ಯಕ್ಕಂಚಿ – ಮುಸಲ್ಯಾನಖೋಡಿ ಗ್ರಾಮದವರೆಗಿನ ರಸ್ತೆ ಕಾಮಗಾರಿ ವಿಚಾರವಾಗಿ ಈಗಾಗಲೇ ಅಂದಿನ ಶಾಸಕ ಮಹೇಶ್ ಕುಮಟಳ್ಳಿ (Mahesh Kumatalli) ಚಾಲನೆ ನೀಡಿದ್ದ ಕಾಮಗಾರಿಗೆ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಮತ್ತೆ ಭೂಮಿ ಪೂಜೆ ನೆರವೇರಿಸಿದ್ದಾರೆ.

ಈ ವಿಚಾರಕ್ಕೆ ಮಹೇಶ್ ಕುಮಟಳ್ಳಿ ಗರಂ ಆಗಿದ್ದಾರೆ. ಈ ಬಗ್ಗೆ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಮಹೇಶ್ ಕುಮಟಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಗೆ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಚಾಲನೆ ನೀಡಿದ್ದು ಗಮನಿಸಿದ್ದೇನೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ – 12 ಸಾವು, ಇಬ್ಬರು ಗಂಭೀರ

ನಾನು ಶಾಸಕನಾಗಿದ್ದಾಗ ಕರ್ನಾಟಕ ನೀರಾವರಿ ನಿಗಮದಿಂದ 16.50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿ 13 ಕಾಮಗಾರಿ ಮಂಜೂರಾತಿ ಪಡೆದಿದ್ದೆ. ಅದರಲ್ಲಿ ಈ ರಸ್ತೆಯೂ ಒಂದು. ಕಳೆದ ಫೆ.2ರಂದು ನಾನು ಈ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಮಾಡಿದ್ದೆ. 8 ತಿಂಗಳು ಆ ಕಾಮಗಾರಿ ತಡೆಹಿಡಿದಿದು, ಈಗ ಚಾಲನೆ ನೀಡಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಗ್ರಾಮೀಣಾಭಿವೃದ್ಧಿ ಯೋಜನೆಯ 8.99 ಕೋಟಿ ರೂ. ಹಾಗೂ ಲೋಕೋಪಯೋಗಿ ಇಲಾಖೆಯ 7 ಕೋಟಿ ರೂ. ಕಾಮಗಾರಿ ಟೆಂಡರ್ ಆಗಿದೆ. ಇದನ್ನು ಬದಲಾಯಿಸಿ ಸ್ಥಳೀಯ ಶಾಸಕರು ಲೆಟರ್ ನೀಡಿದ ಮಾಹಿತಿ ಬಂದಿದೆ. ಈ ಬಗ್ಗೆ ಪಕ್ಷದ ವತಿಯಿಂದ ಹೋರಾಟ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. ಇದನ್ನೂ ಓದಿ: ಅಮೆರಿಕದ ಮೈನೆಯಲ್ಲಿ ಗುಂಡಿನ ದಾಳಿ – 22 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್