ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ (Biklu Shiva) ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬೈರತಿ ಬಸವರಾಜ್‌ಗೆ (Byrati Basavaraj) ಒಂದು ದಿನದ ರಿಲೀಫ್ ಸಿಕ್ಕಿದೆ.
ಇಂದು ಜಯದೇವ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಕಾಯಿಲೆಯ ತಪಾಸಣೆ ನಡೆಸಲು ತನಿಖಾಧಿಕಾರಿ ಡಿವೈಎಸ್‌ಪಿ ಗೌತಮ್‌ಗೆ ನ್ಯಾಯಾಧೀಶರು ಸೂಚನೆ ನೀಡಿದರು. ಶುಕ್ರವಾರ ವೈದ್ಯಕೀಯ ಪರೀಕ್ಷೆ ನಡೆಸಿ ನಾಳೆ ನ್ಯಾಯಾಧೀಶರ ಮನೆಗೆ ಹಾಜರುಪಡಿಸುವಂತೆ ಸೂಚಿಸಿದರು. ಶನಿವಾರ ಪೊಲೀಸ್ ಕಸ್ಟಡಿಯೋ ಅಥವಾ ಜೈಲೋ ಎನ್ನುವುದು ನಿರ್ಧಾರವಾಗಲಿದೆ. ಸಿಐಡಿ ಮೇಲ್ವಿಚಾರಣೆಯಲ್ಲಿ ವೈದ್ಯಕೀಯ ತಪಾಸಣೆಗೆ ಬೈರತಿ ಬಸವರಾಜ್ ಅವರನ್ನು ಕರೆದೊಯ್ಯಲಾಗಿದೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಮೆಡಿಕಲ್ ಟೆಸ್ಟ್, ಕೋರ್ಟ್‌ಗೆ ಹಾಜರು ಪಡಿಸಲಿರೋ ಸಿಐಡಿ
ಬೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ನೀಡದೆ ಮೆಡಿಕಲ್ ಟೆಸ್ಟ್‌ಗೆ ರವಾನಿಸಲಾಯಿತು. ಬೌರಿಂಗ್‌ನಲ್ಲಿ ಹೃದಯ ಸಂಬಂಧಿ ಕಾಯಿಲೆ ಬಗ್ಗೆ ಜಯದೇವದಲ್ಲಿ ಟೆಸ್ಟ್ ನಡೆಸುವಂತೆ ವೈದ್ಯರ ಶಿಫಾರಸು ಹಿನ್ನೆಲೆ ಮಾಜಿ ಸಚಿವರನ್ನು ರವಾನಿಸಲಾಯಿತು.
ಈಗಾಗಲೇ ಹೃದಯ ಸಂಬಂಧಿ ಕಾಯಿಲೆಗೆ ಬೈರತಿ ಬಸವರಾಜ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಸ್ಟಂಟ್ ಹಾಕಿಸಲಾಗಿದೆ. Aspirin ಮಾತ್ರೆ ಸೇವಿಸುತ್ತಿದ್ದಾರೆ. ಒತ್ತಡ ಹೆಚ್ಚಾದರೆ ಹೃದಯಾಘಾತ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್ – ಮಾಜಿ ಸಚಿವ ಬೈರತಿ ಬಸವರಾಜ್ ಅರೆಸ್ಟ್
ಮೆಡಿಕಲ್ ಟೆಸ್ಟ್ ರಿಪೋರ್ಟ್ ಸಹಿತ ನಾಳೆ ಹಾಜರುಪಡಿಸಲು ತನಿಖಾಧಿಕಾರಿಗೆ ಕೋರ್ಟ್ ಸೂಚನೆ ನೀಡಿದೆ. ನಾಳೆ ನ್ಯಾಯಾಧೀಶರ ನಿವಾಸಕ್ಕೆ ಸಿಐಡಿ ಹಾಜರು ಪಡಿಸಲಿದೆ. ಹೀಗಾಗಿ, ಕೋರ್ಟ್ ಆದೇಶದ ಬೆನ್ನಲ್ಲೇ ನೇರವಾಗಿ ಜಯದೇವ ಆಸ್ಪತ್ರೆಗೆ ರವಾನಿಸಲಾಯಿತು.

