ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌ – ಹೇಬಿಯಸ್‌ ಕಾರ್ಪಸ್‌ ಅರ್ಜಿ ವಜಾ

Public TV
1 Min Read

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ (Biklu Shiva) ಕೊಲೆ ಪ್ರಕರಣದಲ್ಲಿ ಕಿರಣ್‌ ಅವರನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿದ್ದ ಹೇಬಿಯಸ್‌ ಕಾರ್ಪಸ್‌ ಅರ್ಜಿಯನ್ನು ಹೈಕೋರ್ಟ್‌ (High Court) ವಜಾಗೊಳಿಸಿದೆ.

ಬೆಂಗಳೂರಲ್ಲಿ ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಕಿರಣ್ ಬಂಧನವನ್ನು ಆತನ ಪತ್ನಿ ಪ್ರಶ್ನಿಸಿದ್ದರು. ಪತಿಯನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಕಿರಣ್‌ ಪತ್ನಿ ಆಂಥೋನಿ ಶಿರ್ಲಿನ್ಯಾ ಹೈಕೋರ್ಟ್‌ಗೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಬಿಕ್ಲು ಶಿವ ಮರ್ಡರ್ ಕೇಸ್ – ಕೊಲೆ ಮಾಡಿದ್ದು ನಾವು ಎಂದು ಐವರು ಶರಣಾಗತಿ

ಅರ್ಜಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಜುಲೈ 16 ರ ಬೆಳಗ್ಗೆ ಪೊಲೀಸರು ಬಂದು ಕಿರಣ್ ಬಗ್ಗೆ ವಿಚಾರಿಸಿದರು. ತಕ್ಷಣ ಕಿರಣ್ ಪೊಲೀಸ್ ಠಾಣೆಗೆ ತೆರಳಿದ್ದ. ನಂತರ ಈ ಬಗ್ಗೆ ಮಾಹಿತಿಯಿಲ್ಲ ಎಂದು ದೂರಿದರು.

ಕಾನೂನು ಪ್ರಕಾರ ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಲಾಗಿದೆ. ಸರ್ಕಾರದ ಪರ ಎಸ್‌ಪಿಪಿ ಬಿ.ಎ.ಬೆಳ್ಳಿಯಪ್ಪ ಹೇಳಿಕೆ ನೀಡಿದ್ದರು. ಸರ್ಕಾರದ ಹೇಳಿಕೆ ದಾಖಲಿಸಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. ಇದನ್ನೂ ಓದಿ: ರೌಡಿಶೀಟರ್ ಶಿವಪ್ರಕಾಶ್ ಕೊಲೆ ಕೇಸ್‌ – ಮಾಜಿ ಸಚಿವ ಬೈರತಿ ಬಸವರಾಜ್ A5 ಆರೋಪಿ

Share This Article