ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆ ಪ್ರಕರಣ ಸಂಬಂಧ 7 ಜನ ಪೊಲೀಸ್ ಅಧಿಕಾರಿಗಳನ್ನ ಅಮಾನತು ಮಾಡಲಾಗಿದೆ.
ಸರ್ಜಾಪುರದ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನ ಜೈಲಿನಲ್ಲಿ ತನ್ನ ಸಹಚರರ ಜತೆ ಕೇಕ್ ಕತ್ತರಿಸಿ ಸೇಬಿನ ಹಾರ ಹಾಕಿಸಿಕೊಂಡು ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಲ್ಲೇ ರೌಡಿಶೀಟರ್ ಭರ್ಜರಿ ಬರ್ತ್ಡೇ ಪಾರ್ಟಿ
ಜೈಲಿನ ಬ್ಯಾರಕ್‌ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಈತ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟೋರಿಯಸ್ ರೌಡಿಶೀಟರ್. ಮೊಬೈಲ್‌ನಲ್ಲಿ ಬರ್ತ್‌ಡೇ ಪಾರ್ಟಿಯ ವಿಡಿಯೋ, ಪೋಟೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದ.
ಬರ್ತ್‌ಡೇ ಆಚರಣೆಯ ವಿಡಿಯೋ ಹೊರಗಡೆ ಬಂದಿದ್ದೇ ತಡ, ಎಫ್‌ಐಆರ್ ದಾಖಲಾಗಿತ್ತು. ಇದೀಗ ಎಡಿಜಿಪಿ ದಯಾನಂದ್ ಅವರು ಇಲಾಖಾ ತನಿಖೆಯ ಬಳಿಕ 7 ಜನ ಅಧಿಕಾರಿಗಳನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಆನೇಕಲ್‌ನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಕೊಲೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು