ನೆಲಮಂಗಲ| ಚಾಕು, ಮಾರಕಾಸ್ತ್ರಗಳಿಂದ ರೌಡಿಶೀಟರ್‌ ಹತ್ಯೆ

1 Min Read

ನೆಲಮಂಗಲ: ಚಾಕು ಮತ್ತು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನು ಹತ್ಯೆ ಮಾಡಿರುವ ಘಟನೆ ನೆಲಮಂಗಲ (Nelamangala) ಬಳಿಯ ಬಾಲಾಜಿ ಫಾರಂ ಹೌಸ್‌ನಲ್ಲಿ ನಡೆದಿದೆ.

ಬೆಂಗಳೂರಿನ ಆಟೋ ನಾಗ (32) ಕೊಲೆಯಾದ ರೌಡಿಶೀಟರ್.‌ ಈತನ ಮೇಲೆ ರೌಡಿಶೀಟರ್ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಹೈದರಾಬಾದ್‌ನ ಫರ್ನಿಚರ್ ಅಂಗಡಿ ಕಟ್ಟಡದಲ್ಲಿ ಬೆಂಕಿ ಅವಘಡ; ಇಬ್ಬರು ಮಕ್ಕಳು ಸೇರಿ 5 ಮಂದಿ ಸಾವು

ಬಾಲಾಜಿ ಫಾರಂ ಹೌಸ್‌ನ ರೂಮ್‌ನಲ್ಲಿ ಕೊಲೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಲಗ್ಗೆರೆ ಹಾಗೂ ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಆಟೋ ನಾಗ ಮೇಲೆ ರೌಡಿಶೀಟ್‌ ಓಪನ್‌ ಆಗಿತ್ತು. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article